Site icon PowerTV

ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ರಾಜೀನಾಮೆ

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಶ್ರೀಲಂಕಾ ದೇಶದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಎಲ್ಲ ನಾಗರಿಕರ ಸುರಕ್ಷತೆ ಮತ್ತು ಸರ್ಕಾರ ಮುಂದುವರಿಯುವ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಸರ್ಕಾರಕ್ಕೆ ದಾರಿ ಮಾಡಿಕೊಡುವ ಉದ್ದೇಶದಿಂದ ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸನ್ನು ನಾನು ಅಂಗೀಕರಿಸುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ, ಅಧ್ಯಕ್ಷ ಗೊಟಬಯ ರಾಜಪಕ್ಸ ಮನೆಗೆ ನುಗ್ಗಿರುವ ಪ್ರತಿಭಟನಾಕಾರರು ಮನೆಯನ್ನು ವಶಕ್ಕೆ ಪಡೆದಿದ್ದಾರೆ, ಇದರ ಸೂಚನೆ ಅರಿತಿದ್ದ ಗೊಟಬಯ ನಿನ್ನೆಯೇ ಮನೆಯಿಂದ ಪರಾರಿಯಾಗಿದ್ದಾರೆ. ಸದ್ಯ, ಪ್ರತಿಭಟನಾಕಾರರ ಆಕ್ರೋಶದ ಕಟ್ಟೆ ಒಡೆದಿದ್ದು, ಅನಿಯಂತ್ರಿತ ಸ್ಥಿತಿ ನಿರ್ಮಾಣವಾಗಿದೆ.

ಈ ಮಧ್ಯೆ, ಪಕ್ಷದ ಉನ್ನತ ಮಟ್ಟದ ಸಭೆ ನಡೆಸಿದ್ದ ವಿಕ್ರಮ ಸಿಂಘೆ ತಮ್ಮ ರಾಜೀನಾಮೆಯ ಘೋಷಣೆ ಮಾಡಿದ್ದಾರೆ.

Exit mobile version