Site icon PowerTV

ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಅಮರನಾಥ್ ಯಾತ್ರೆ ಅವಘಡದಲ್ಲಿ ಸಿಲುಕಿದವರನ್ನ ಸುರಕ್ಷಿತವಾಗಿ ಕರೆತರಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಅವರನ್ನ ರಕ್ಷಣೆ ಮಾಡಬೇಕು. ಸಿಲುಕಿದವರನ್ನ ಸುರಕ್ಷಿತವಾಗಿ ಕರೆತರಬೇಕು. ಉಸ್ತುವಾರಿಗಳು ಜಿಲ್ಲೆಗೆ ಹೋಗ್ತಿಲ್ಲ. ಜನರ ಕಷ್ಟ ಸುಖಗಳನ್ನ ಕೇಳಬೇಕಲ್ಲ. ಇಲ್ಲಿ ಬರಿ ಮೀಟಿಂಗ್ ಮಾಡಿದ್ರೆ ಸಾಕಾ? ಚೀಫ್ ಮಿನಿಸ್ಟರ್ ವಿಸಿಟ್ ಮಾಡಬೇಕು. ನರೇಂದ್ರ ಮೋದಿ ಪರಿಹಾರ ಕೊಟ್ಟಿದ್ದಾರೇನ್ರೀ ಸಾವಿರಾರು ಕೋಟಿ ಕೊಟ್ಟಿದ್ದೇವೆ ಅಂತಾರಲ್ಲ ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೂ,ಸಾಕ್ಸ್ ಬಗ್ಗೆ ಸಚಿವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಾಕ್ಸ್ ,ಶೂ ಕೊಡ್ತಿದ್ದವರು ನಾವು. ಬಡಮಕ್ಕಳಿಗೆ ಅನುಕೂಲ ಆಗಲಿ ಅಂತ ಕೊಡ್ತಿದ್ದೆವು. ಸಮಾನಮನೋಭಾವ ಇರಲಿ ಎಂದು ಕೊಡ್ತಿದ್ವಿ. ಇವರು ನಿಲ್ಲಿಸೋಕೆ ಹೊರಟಿದ್ದಾರೆ. ನಾವು ಒತ್ತಾಯ ಮಾಡಿದ ಮೇಲೆ ಕೊಡ್ತೇವೆ ಅಂದ್ರು, ಶಾಲೆಗಳು ಶುರುವಾಗಿವೆ. ಶೂ,ಯೂನಿಫಾರಂ ಕೊಡಬೇಕಿತ್ತು. ಆದರೆ ಇನ್ನೂ ಯಾವುದನ್ನೂ ಕೊಟ್ಟಿಲ್ಲ. ಇಮಿಡಿಯಟ್ಲಿ ಕೊಡಬೇಕು ಎಂದು ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

Exit mobile version