Site icon PowerTV

ಆಯುಷ್ಮಾನ್​​​​​​ ಕಾರ್ಡ್​​​ ವಿತರಣೆ ಮಾಡಿದ ಶೋಭಾ ಕರಂದ್ಲಾಜೆ

ಕೋಲಾರ: ಮಾಲೂರಿನಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸಲಾಯಿತು. ಮಾಲೂರು ಪಟ್ಟಣದಲ್ಲಿ ಬಿಜೆಪಿ ರಾಜ್ಯ ಫಲಾನುಭವಿಗಳ ಪ್ರಕೋಷ್ಠ ವತಿಯಿಂದ ಕಾರ್ಯಕ್ರಮವನ್ನ ಹಮ್ಮಿಕೊಳ್ಳಾಗಿತ್ತು. ಕಾರ್ಯಕ್ರಮವನ್ನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ್ರು.

ಆರೋಗ್ಯದಲ್ಲಿ ಮಹತ್ವದ ಪಾತ್ರ ವಹಿಸಿರುವ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಆಯುಷ್ಮಾನ್ ಭಾರತ್ ಕಾರ್ಡ್, ಸಾಮಾನ್ಯ ನಾಗರೀಕನಿಗೂ ತಲುಪಿಸುವ ಉದ್ದೇಶದಿಂದ ಕಾರ್ಯಕ್ರಮವನ್ನ ಮಾಲೂರಿನಲ್ಲಿ ಆಯೋಜಿಸಲಾಗಿತ್ತು.

ಫಲಾನುಭವಿಗಳಿಗೆ ಕಾರ್ಡ್ ವಿತರಿಸಿದ ಸಚಿವೆ ಶೋಭಾ ಕರಂದ್ಲಾಜೆ ಅವ್ರು, ಯೋಜನೆಯ ಮಹತ್ವದ ಕುರಿತು ಸುದೀರ್ಘವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ನಾಗೇಶ್, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಭಾಗವಹಿಸಿದ್ರು. ನೂರಾರು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಆಯುಷ್ಮಾನ್ ಕಾರ್ಡ್ ಗಳನ್ನ ಪಡೆದುಕೊಂಡರು.

Exit mobile version