Site icon PowerTV

ಶ್ರೀಲಂಕಾ ಬಿಕ್ಕಟ್ಟು: ಪ್ರಧಾನಮಂತ್ರಿ ಮನೆಗೆ ಬೆಂಕಿ

ಶ್ರೀಲಂಕಾ : ರಾಜಧಾನಿಯಲ್ಲಿರುವ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ನಿನ್ನೆ ಸಂಜೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಸಂಪೂರ್ಣ ಹದಗೆಟ್ಟಿರುವ ಆರ್ಥಿಕ ಬಿಕ್ಕಟ್ಟಿನಿಂದ ಜನರು ರೊಚ್ಚಿಗೆದ್ದು ಕೃತ್ಯವೆಸಗಿದ್ದಾಗಿ ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.

ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ನುಗ್ಗಿ ಬೆಂಕಿ ಹಚ್ಚಿದ್ದಾರೆ’ ಎಂದು ಲಂಕಾ ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರೂ, ಅವರು ಪ್ರಧಾನಿ ಗೃಹ ಪ್ರವೇಶಿಸಿ ದಾಂಧಲೆ ನಡೆಸಿದ್ದಾರೆ.

ಪ್ರತಿಭಟನಾಕಾರರು ಪ್ರಧಾನಿಯವರ ವಾಹನಗಳಿಗೆ ಹಾನಿ ಮಾಡುತ್ತಿರುವುದು ಕಂಡುಬಂದಿದೆ. ಮೇ ತಿಂಗಳಲ್ಲಿ ಪ್ರಧಾನ ಮಂತ್ರಿಯಾಗಿ ನೇಮಕಗೊಂಡಿದ್ದ ವಿಕ್ರಮಸಿಂಘೆ ಅವರು ಸರ್ಕಾರದ ಮುಂದುವರಿಕೆ ಮತ್ತು ಎಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಈಗಾಗಲೇ ಘೋಷಿಸಿದ್ದಾರೆ.

Exit mobile version