Site icon PowerTV

ಮೂಲ ಕಾಂಗ್ರೆಸ್ಸಿಗರಿಗೆ ಈಗ ಸಿದ್ದರಾಮಯ್ಯನ ಚಾಕರಿ ಮಾಡುವ ಸುಯೋಗ: ಬಿಜೆಪಿ

ಬೆಂಗಳೂರು: ಸಿದ್ದರಾಮೋತ್ಸವದ ವಿಚಾರವಾಗಿ ಕಾಂಗ್ರೆಸ್ಸಿನಲ್ಲೇ ಪ್ರಮುಖ ನಾಯಕರ ನಡುವೆ ಭಿನ್ನಮತ ಸ್ಫೋಟಗೊಂಡಿದೆ. ಕೆಲವರು ಸಿದ್ದರಾಮೋತ್ಸವಕ್ಕೆ ಬೆಂಬಲಿಸಿದರೆ ಇನ್ನೂ ಕೆಲವರು ನಾಮಕಾವಸ್ಥೆಗೆ ಬೆಂಬಲಿಸಿ, ಪರೋಕ್ಷವಾಗಿ ಚಾಟಿ ಬೀಸುತ್ತಿದ್ದಾರೆ. ಈ ನಡುವೆ ಆಗಾಗ್ಗೆ ಬಿಜೆಪಿ ಕಾಲೆಳೆಯುವ ಕೆಲಸ ಮಾಡುತ್ತಿದೆ.

ಸಿದ್ದರಾಮೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಬಿಜೆಪಿ, ಮೂಲ ಕಾಂಗ್ರೆಸಿಗರಿಗೆ ಸಿದ್ದರಾಮಯ್ಯ ಚಾಕರಿ ಮಾಡುವ ಸುಯೋಗ ಬಂದಿದೆ. ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೋರ್ವ ಸಿಎಂ ಕುರ್ಚಿಯ ಕನಸುಗಾರನಾಗಿದ್ದಾರೆ. ಶೀಘ್ರದಲ್ಲೇ ಕಾಂಗ್ರೆಸ್ `ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದೆ.

ಅಧಿಕಾರದಾಹಿ ಸಿದ್ದರಾಮಯ್ಯ ವಿರುದ್ಧ ಸಹನೆಯ ಕಟ್ಟೆ ಒಡೆದಿದೆ. ಎಷ್ಟೆಂದರೂ ಹರಿಪ್ರಸಾದ್ ಮೂಲ ಕಾಂಗ್ರೆಸ್ಸಿಗ, ವಲಸಿಗ ಸಿದ್ದರಾಮಯ್ಯ ಅವರನ್ನು ಎಷ್ಟು ವರ್ಷಗಳ ಕಾಲ ಸಹಿಸಿಕೊಳ್ಳಲು ಸಾಧ್ಯ? ಎಂದು ಟ್ವೀಟ್‌ನಲ್ಲೇ ಕಾಲೆಳೆಯಲಾಗಿದೆ.

Exit mobile version