Site icon PowerTV

ನ್ಯಾಯಾಂಗ ನಿಂದನೆ ಪ್ರಕರಣ : ಮಲ್ಯಗೆ ಜೈಲು

2017ರಲ್ಲಿನ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ವಿಜಯ್ ಮಲ್ಯ ಪದೇ ಪದೇ ಹಾಜರಾಗದಿರುವ ಬಗ್ಗೆ ಕೆರಳಿದ ಸುಪ್ರೀಂ ಕೋರ್ಟ್ ಎಂದು ನಿರ್ಧರಿಸಿದ್ದು ಅವರಿಗೆ 2,000 ರೂಪಾಯಿ ದಂಡವನ್ನೂ ವಿಧಿಸಿದೆ. ದಂಡವನ್ನು ಸಕಾಲದಲ್ಲಿ ಠೇವಣಿ ಮಾಡದಿದ್ದರೆ ವಿಜಯ್ ಮಲ್ಯ ಇನ್ನೂ ಎರಡು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಖಡಕ್ ಆಗಿ ಆದೇಶಿಸಿದೆ. “ವಿಜಯ್ ಮಲ್ಯ ಯಾವುದೇ ಪಶ್ಚಾತ್ತಾಪವನ್ನು ವ್ಯಕ್ತಪಡಿಸಲಿಲ್ಲ” ಎಂದು ನ್ಯಾಯಾಲಯವು ತನ್ನ ಆದೇಶವನ್ನು ಅಂಗೀಕರಿಸುವಾಗ ಗಮನಿಸಿದ್ದಾಗಿ ತಿಳಿಸಿದೆ.

ಎಸ್‌ಬಿಎಂ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ಪ್ರಕಟಿಸಿದೆ. 2017ರಲ್ಲಿ ದೇಶ ಬಿಟ್ಟು ಹೋಗಿದ್ದ ಉದ್ಯಮಿ ವಿಜಯ್ ಮಲ್ಯ ನಂತರ ತಮ್ಮ ಮಕ್ಕಳಿಗೆ 40 ಮಿಲಿಯನ್ ಡಾಲರ್ ವರ್ಗಾಯಿಸಿದ್ದರು. ಈ ಪ್ರಕರಣದಲ್ಲಿ ವಿಜಯ್ ಮಲ್ಯ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಜೊತೆಗೆ ಇಂದು ಸುಪ್ರೀಂ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಘೋಷಿಸಿದೆ.

Exit mobile version