Friday, August 29, 2025
HomeUncategorizedಅಹಮದಾಬಾದ್‌ನಲ್ಲಿ ದಾಖಲೆ ಮಳೆ

ಅಹಮದಾಬಾದ್‌ನಲ್ಲಿ ದಾಖಲೆ ಮಳೆ

ಮುಂಬೈ: ಮಹಾರಾಷ್ಟ್ರದಲ್ಲಿ ಸಿಕ್ಕಾಪಟ್ಟೆ ಮಳೆಯಾಗುತ್ತಿದ್ದು, ಮುಂಬೈ, ಥಾಣೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.. ಇನ್ನು, ಗುಜರಾತ್‌ ಅಕ್ಷರಶಃ ಅಲ್ಲೋಲ ಕಲ್ಲೋಲವೇ ಸೃಷ್ಠಿಯಾಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮುಂಬೈನಲ್ಲಿ ಆರೆಂಜ್ ಅಲರ್ಟ್ ಮತ್ತು ಮಹಾರಾಷ್ಟ್ರದ ರಾಯಗಡ, ರತ್ನಗಿರಿ, ಪುಣೆ ಮತ್ತು ಸತಾರಾ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ಮೂರು ದಿನಗಳಲ್ಲಿ ಮಹಾರಾಷ್ಟ್ರ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಐಎಂಡಿ ನೀಡಿದೆ. ಹೀಗಾಗಿ ಆಯಾ ಪ್ರದೇಶದಲ್ಲಿ ಮಳೆಯಾಗುವ ಮುನ್ಸೂಚನೆ ಅನುಸಾರ ಕೆಂಪು ಮತ್ತು ಕಿತ್ತಳೆ ಎಚ್ಚರಿಕೆಗಳನ್ನು ನೀಡಿದೆ.

ನಾಗ್ಪುರದ ಪ್ರಾದೇಶಿಕ ಹವಾಮಾನ ಕೇಂದ್ರ ಚಂದ್ರಾಪುರ ಮತ್ತು ಗಡ್ಚಿರೋಲಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು, 115 ಮಿಮೀ ಮಳೆ ಅಹಮದಾಬಾದ್ನಲ್ಲಿ ಮಳೆಯು 5 ವರ್ಷಗಳ ದಾಖಲೆಯನ್ನು ಮುರಿದಿದೆ. 3 ಗಂಟೆಗಳಲ್ಲಿ 115 ಮಿ. ಮೀ. ಮಳೆಯಾಗಿದೆ. ಅಹಮದಾಬಾದ್ ಕೇವಲ ಮೂರು ಗಂಟೆಗಳಲ್ಲಿ 115 ಮಿ. ಮೀ. ಮಳೆಯಾಗುವುದರೊಂದಿಗೆ 5 ವರ್ಷಗಳ ದಾಖಲೆಯನ್ನು ಮುರಿದಿದೆ. ಮಳೆಯು ನಗರದ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ದಾಖಲೆ ಬರೆದಿದೆ. ಪಶ್ಚಿಮ ನಗರ ಪ್ರದೇಶಗಳಲ್ಲಿ ಅನೇಕ ಐಷಾರಾಮಿ ಬಂಗಲೆಗಳಿಗೆ ಹಾಗೂ ನೆಲ ಮಹಡಿಯ ಪ್ರದೇಶಗಳಿಗೆ ನೀರು ನುಗ್ಗಿದೆ.

ಗುಜರಾತ್ ಮಳೆಗೆ ಇದುವರೆಗೆ 61 ಜನರ ಸಾವು ಗುಜರಾತಿನಲ್ಲಿ ಭಾರೀ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಗುಜರಾತ್ನ ಹಲವಾರು ಗ್ರಾಮಗಳು ಸಂಪರ್ಕ ಕಳೆದುಕೊಂಡಿದ್ದು, ಜನರನ್ನು ರಕ್ಷಿಸಲು ಹೆಲಿಕಾಪ್ಟರ್ಗಳನ್ನು ನಿಯೋಜಿಸಲು ಅಧಿಕಾರಿಗಳು ಒತ್ತಾಯಿಸಿದ್ದಾರೆ. ಪ್ರವಾಹದಿಂದಾಗಿ ಇದುವರೆಗೆ 61 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದೇ ವೇಳೆ ಕೇಂದ್ರವು ಗುಜರಾತ್ ಬಗ್ಗೆ ಕಾಳಜಿ ವಹಿಸಿದೆ. ಪ್ರಧಾನಿ ಮೋದಿ ಅವರು ರಾಜ್ಯದ ಮುಖ್ಯಮಂತ್ರಿ ಭೂಪೇಂದ್ರ ರಜನಿಕಾಂತ್ ಪಟೇಲ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು.

ಗುಜರಾತ್ ಮುಖ್ಯಮಂತ್ರಿ ಜೊತೆಗಿನ ಸಂವಾದದಲ್ಲಿ ಪ್ರಧಾನಿ ಮೋದಿ ರಾಜ್ಯದ ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸಿದರು. ಗುಜರಾತ್ ಪ್ರವಾಹದಿಂದ ಸಂತ್ರಸ್ತರಾಗಿರುವ ಜನರ ಸಂಕಷ್ಟಗಳನ್ನು ನಿವಾರಿಸಲು ಕೇಂದ್ರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಬ್ಯೂರೋ ರಿಪೋರ್ಟ್‌ ಪವರ್‌ಟಿವಿ

RELATED ARTICLES
- Advertisment -
Google search engine

Most Popular

Recent Comments