Site icon PowerTV

ಗುಡ್ಡ ಕುಸಿದು ಮನೆ ಸಂಪೂರ್ಣ ಜಖಂ

ಮಂಗಳೂರು : ಗೃಹಪ್ರವೇಶಕ್ಕೆ ರೆಡಿಯಾಗಿದ್ದ ಮನೆ ಮಳೆಯಿಂದ ನೆಲಸಮ ಆಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕದಲ್ಲಿ ನಡೆದಿದೆ.

ಮೂರು ದಿನದ ಹಿಂದೆ ಗುಡ್ಡದ ಮೇಲಿಂದ ಮರ ಬಿದ್ದು ಮನೆ ಗೋಡೆಗಳಲ್ಲಿ ಬಿರುಕು ಬಿಟ್ಟಿತ್ತು. ಬಿರುಕು ಬಿಟ್ಟಿರುವ ಗೋಡೆ ರಿಪೇರಿ ಕೆಲಸ ಮಾಡಲಾಗಿತ್ತು. ಜುಲೈ 18ರಂದು ಗೃಹಪ್ರವೇಶ ನೆರವೇರಿಸಲು ಎಲ್ಲ ತಯಾರಿ ನಡೆದಿತ್ತು. ಆದರೆ ಅಷ್ಟರಲ್ಲೇ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮವಾಗಿದೆ.

ತೇಜ್ ಕುಮಾರ್ ಮತ್ತು ತಾರಾಮತಿ ದಂಪತಿಯ ಮನೆ ಇದಾಗಿದ್ದು ಅವರ ಪುತ್ರರಾದ ಪ್ರಜ್ವಲ್ ಮತ್ತು ಉಜ್ವಲ್ ಎಂಬ ಸಹೋದರರು ಮನೆಯಲ್ಲಿದ್ದರು. ಹಾಲ್​ನಲ್ಲಿ‌ ಮಲಗಿದ್ದ ಸೋದರರು ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಬಂದಿದ್ದರು. ಈ ವೇಳೆ ಗುಡ್ಡ ಕುಸಿದಿದ್ದು ಮೂರು ಬೆಡ್ ರೂಂ ತುಂಬ ಮಣ್ಣು ಆವರಿಸಿಕೊಂಡಿದೆ. ಗುಡ್ಡ ಕುಸಿದ ಹಿನ್ನೆಲೆ ಮನೆ ಬಳಿಯಿದ್ದ ಮೂರು ಬೈಕ್​ಗಳು ಮಣ್ಣಲ್ಲಿ ಸಿಲುಕಿ ಹಾನಿಯಾಗಿವೆ. ಮನೆಯಲ್ಲಿದ್ದವರು ಹೊರ ಬಂದಿದ್ದರಿಂದ ದುರಂತ ತಪ್ಪಿದೆ.

Exit mobile version