Site icon PowerTV

ಹಣ ಎಸೆದ ಪ್ರಕರಣ; ಮಹಿಳೆ ತಪ್ಪಿಲ್ಲ ಎಂದ ಡಿಕೆಶಿ

ಮೈಸೂರು: ಮಹಿಳೆಯ ಆಕ್ರೋಶದಲ್ಲಿ ತಪ್ಪಿಲ್ಲ, ಇಂತಹ ಘಟನೆಗೆ ಕಾರಣರಾದವರನ್ನು ಪ್ರಶ್ನೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೆರೂರು ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಪರಿಹಾರದ ಹಣವನ್ನು ಎಸೆದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹಿಳೆಯ ಆಕ್ರೋಶ ತಪ್ಪಲ್ಲ. ಶಾಂತಿ ಕದಡುವ ಕೆಲಸ ಮಾಡುತ್ತಿರುವ ಸರ್ಕಾರ ಈ ಬಗ್ಗೆ ಉತ್ತರ ಕೊಡಬೇಕು. ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದರು.

ಅಷ್ಟೆಅಲ್ಲದೇ ಯಾರೂ ಕೂಡ ಅರ್ಜಿ ಹಾಕಿ ಹುಟ್ಟುವುದಿಲ್ಲ, ಭಗವಂತನ ಪ್ರೇರಣೆ. ಸಂಘರ್ಷದ ವಾತಾವರಣ ನಿರ್ಮಾಣ ಮಾಡುತ್ತಿರುವವರನ್ನು ಪ್ರಶ್ನೆ ಮಾಡಬೇಕು ಎಂದರು. ಕುವೆಂಪು ಅವರು ಹೇಳಿದಂತೆ ಇದು ಸರ್ವಜನಾಂಗದ ಶಾಂತಿಯ ತೋಟವಾಗಿರಬೇಕು ಹೊರತು ಕೋಮು ಗಲಭೆಗೆ ಕುಮ್ಮಕ್ಕು ನೀಡುವಂತಹ ಕೆಲಸವಾಗಬಾರದು. ರಾಜ್ಯ ಸರ್ಕಾರ ಈ ಬಗ್ಗೆ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Exit mobile version