Wednesday, September 10, 2025
HomeUncategorizedಮಲೆನಾಡಿನಲ್ಲಿ ಮುಂದುವರಿದ ಮಳೆರಾಯನ ಆರ್ಭಟ

ಮಲೆನಾಡಿನಲ್ಲಿ ಮುಂದುವರಿದ ಮಳೆರಾಯನ ಆರ್ಭಟ

ಶಿವಮೊಗ್ಗ : ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲೇ ಸಹಿತ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ.

ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಯಡೂರಿನಲ್ಲಿ 217 ಮಿ.ಮೀ ಮಳೆ ದಾಖಲಾಗಿದ್ದು, ಬಿರುಗಾಳಿ ಸಹಿತ ಎಡಬಿಡದೆ ಭಾರೀ ಮಳೆ ಸುರಿಯುತ್ತಿದೆ.

ಮಳೆಗೆ ಅಪಾಯದ ಮಟ್ಟ ಮೀರಿ ತುಂಬಿ ಹಳ್ಳ ಕೊಳ್ಳಗಳು ಹರಿಯುತ್ತಿದ್ದು, 1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದಲ್ಲಿ 1787.30 ಅಡಿ ನೀರಿನ‌ಮಟ್ಟ ತಲುಪಿದೆ. ಕಳೆದ ವರ್ಷ ಇದೇ ಅವಧಿಗೆ ಜಲಾಶಯದ ನೀರಿನ ಮಟ್ಟ 1786.05 ದಾಖಲಾಗಿತ್ತು. ಹಾಗೆನೇ ಈ ಜಲಾಶಯಕ್ಕೆ 56,138 ಕ್ಯೂಸೆಕ್ ನೀರು ಹರಿದುಬರುತ್ತಿದೆ.

RELATED ARTICLES
- Advertisment -
Google search engine

Most Popular

Recent Comments