Site icon PowerTV

8 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್ ಅಭಿಯಾನಕ್ಕೆ ಇಂದು ಚಾಲನೆ

ಬೆಂಗಳೂರು : 8 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್ ಅಭಿಯಾನಕ್ಕೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಿದ್ದಾರೆ.

ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ 18 ವರ್ಷ ಮೇಲ್ಪಟ್ಟವರ ಬೂಸ್ಟರ್ ಡೋಸ್ ಅಭಿಯಾನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಸುಧಾಕರ್, ಮುರುಗೇಶ್ ನಿರಾಣಿ, ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ರಾಜ್ಯಾದ್ಯಂತ ಕೊರೊನಾ ಲಸಿಕೆ ಅಮೃತ ಮಹೋತ್ಸವ ಅಭಿಯಾನ 75 ದಿನಗಳ ಕಾಲ ಅಭಿಯಾನ ನಡೆಯಲಿದೆ. ಸೆ30ರವರೆಗೂ ಉಚಿತ ಲಸಿಕೆ ನೀಡಲಾಗುವುದು. ರಾಜ್ಯಾದ್ಯಂತ ಜಿಲ್ಲಾ, ತಾಲೂಕು, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಲಸಿಕೆ ಲಭ್ಯವಿರಲಿದೆ. 18 ರಿಂದ 59 ವರ್ಷದವರಿಗೆ ಕೊರೊನಾ ಮೂರನೇ ಡೋಸ್ ಲಸಿಕೆ‌ ಉಚಿತ ನೀಡಲಾಗುತ್ತಿದ್ದು, ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾತ್ರ ಉಚಿತವಾಗಿ 3ನೇ ಡೋಸ್‌ ಲಭ್ಯವಿತ್ತು. ಇದುವರೆಗೂ ರಾಜ್ಯದಲ್ಲಿ ಕೇವಲ ನಾಲ್ಕು ಲಕ್ಷ ಮಂದಿ ಮಾತ್ರವೇ ಶುಲ್ಕ ನೀಡಿ ಮೂರನೇ ಡೋಸ್‌ ಪಡೆದಿದ್ದಾರೆ

Exit mobile version