Site icon PowerTV

ಬಿಜೆಪಿ ಪಕ್ಷದಲ್ಲಿ ವ್ಯಕ್ತಿ ಪೂಜೆ ಇಲ್ಲ : ಸಚಿವ ಸುಧಾಕರ್

ಬೆಂಗಳೂರು : ಜುಲೈ 28ಕ್ಕೆ ಬಸವರಾಜ್ ಬೊಮ್ಮಾಯಿ ಸಿಎಂ ಆಗಿ ಒಂದು ವರ್ಷವಾಯಿತು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ಒಂದು ವರ್ಷದ ಸ್ವಚ್ಛ ಆಡಳಿತ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು. ಅದಕ್ಕಾಗಿ ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಾಧನಾ ಸಮಾವೇಶ ಮಾಡುತ್ತೇವೆ. ಈ ಬಗ್ಗೆ ಹಲವು ಸುತ್ತಿನ ಸಭೆ ನಡೆದಿದೆ, ಜುಲೈ 28ಕ್ಕೆ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್​​​ನಿಂದ ಆಗಸ್ಟ್ 3ರಂದು ಸಿದ್ಧರಾಮೋತ್ಸವ ವಿಚಾರವಾಗಿ ಮಾತನಾಡಿದ ಅವರು, ಸಚಿವ ಸುಧಾಕರ್ ಸಿದ್ದರಾಮೋತ್ಸವ ಕಾರ್ಯಕ್ರಮದ ಬಗ್ಗೆ ಲೇವಡಿ ಮಾಡಿದ್ದಾರೆ. ಬಿಜೆಪಿ ಪಕ್ಷದಲ್ಲಿ ವ್ಯಕ್ತಿ ಪೂಜೆ ಇಲ್ಲ. ಆದರೆ ಕಾಂಗ್ರೆಸ್ ನಲ್ಲಿ ಏನಾಗ್ತಿದೆ..? ಬಿಜೆಪಿಯಲ್ಲಿ ದೇಶ ಮೊದಲು, ಪಕ್ಷ ಎರಡನೇದ್ದು, ಆದರೆ ಕಾಂಗ್ರೆಸ್ ನಲ್ಲಿ ವ್ಯಕ್ತಿ ಪೂಜೆ ಮಾಡೋದಕ್ಕೆ ಹೊರಟಿದ್ದಾರೆ. ರಾಜ್ಯದಲ್ಲಿ ಮಳೆ ಬಂದು 12 ಜಿಲ್ಲೆಯಲ್ಲಿ ಮಳೆ ಗಂಭೀರವಾಗಿ ಹೊಡೆತ ಕೊಟ್ಟಿದೆ. ಇಂಥಾ ಪರಿಸ್ಥಿತಿಯಲ್ಲಿ ಜನರಿಗೆ ನೆರವಾಗುವ ಕಾರ್ಯಕ್ರಮ ಮಾಡಬೇಕು ಎಂದರು.

Exit mobile version