Site icon PowerTV

ಹೈವೇ ದಾಟಲು ಹೋಗಿ ಕಾರು ಡಿಕ್ಕಿ: ಸ್ಥಳದಲ್ಲೇ ಪಾದಾಚಾರಿ ಸಾವು

ಬೆಂಗಳೂರು ಗ್ರಾಮಾಂತರ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯಾಷನಲ್ ಹೈವೆ ಕಾಫಿ ಡೇ ಜಂಕ್ಷನ್ ಬಳಿ ನಡೆದಿದೆ.

ಚಿಕ್ಕಬಳ್ಳಾಪುರದ ಬಾಗೇಪಲ್ಲಿಯ ಮಾರಗಾನಕುಂಟೆ ಮೂಲದ 50ರಿಂದ 55 ವರ್ಷದ ವ್ಯಕ್ತಿ ಕಾರು ಡಿಕ್ಕಿಯ ರಭಸಕ್ಕೆ ತಲೆ ನಜ್ಜುಗುಜ್ಹಾಗಿ ಸಾವನ್ನಪ್ಪಿರುವ ವ್ಯಕ್ತಿ. ದೇವನಹಳ್ಳಿ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ದೇವನಹಳ್ಳಿ E.O.ವಸಂತ್ ಅವರ ಕಾರು ಅಪಘಾತಕ್ಕೆ ಕಾರಣವಾಗಿದೆ.

ಸದ್ಯ ಯಲಹಂಕ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version