Site icon PowerTV

ಡಿಎಸ್‌ಪಿ ಮೇಲೆ ಲಾರಿ ಹರಿಸಿ ಕೊಲೆ

ಹರಿಯಾಣ: ಅಕ್ರಮ ಗಣಿಗಾರಿಕೆ ತಡೆಗಟ್ಟಲು ಮುಂದಾಗಿದ್ದ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಗುರುಗ್ರಾಮದಲ್ಲಿ ಲಾರಿ ಹರಿಸಿ ಹತ್ಯೆ ಮಾಡಲಾಗಿದೆ.

ತವಾಡು ಮೇವತ್‌ ಡಿಎಸ್‌ಪಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅವರು ನುಹ್‌ನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿದ್ದರು. ತನಿಖೆಯ ಭಾಗವಾಗಿ ಲಾರಿಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದರು. ಆದರೆ, ಲಾರಿ ತಡೆಯಲು ಮುಂದಾದ ಸುರೇಂದ್ರ ಸಿಂಗ್ ಅವರಿಗೆ ಚಾಲಕನೊಬ್ಬ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ಸುರೇಂದ್ರ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರೋಪಿ ಪತ್ತೆಗಾಗಿ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Exit mobile version