Site icon PowerTV

ಪ್ರತಾಪ್ ಸಿಂಹ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು : ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ದಸರಾ ಮಹೋತ್ಸವಕ್ಕೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ತಮ್ಮ ಕ್ಷೇತ್ರಕ್ಕೆ ಸಂಬಂಧ ಪಟ್ಟ ದಾಖಲೆಯೊಂದನ್ನು ಸಿಎಂಗೆ ನೀಡಿದ್ದಾರೆ.ಅದನ್ನು ಓದುವಾಗಲೇ ನಿಮ್ಮ ಜೊತೆಗೆ ಫೋಟೋ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಇದಕ್ಕೆ ಕೋಪಗೊಂಡ ಬೊಮ್ಮಾಯಿ ವಿಶ್ವಾಸ ಇಲ್ಲಾಂದ್ರೆ ಇದನ್ನು ವಾಪಸ್ ತಗೊಂಡು ಹೋಗು ಎಂದು ಗುಡುಗಿದ್ದಾರೆ.

ಬೊಮ್ಮಾಯಿ ಅವರ ಕೋಪ ಕಂಡ ಪ್ರತಾಪ್ ಸಿಂಹ, ನಿಮ್ಮ ಜೊತೆ ಒಂದು ಫೋಟೋ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ, ಇದರಿಂದ ಮತ್ತಷ್ಟು ಅಸಮಾಧಾನಗೊಂಡ ಸಿಎಂ ಬೊಮ್ಮಾಯಿ, ‘ನನ್ ಜೊತೆ ಫೋಟೊ ಬೇಡ, ಅತಿ ಬುದ್ಧಿವಂತರ ಜೊತೆ ಕೆಲಸ ಮಾಡೋದೆ ಕಷ್ಟ ಎಂದು ಗುಡುಗಿದ್ದಾರೆ. ಸದ್ಯ ಸಿಎಂ ಬೊಮ್ಮಾಯಿಯ ಈ ನಡೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧದ ಚರ್ಚೆ ನಡೆಯುತ್ತಿದೆ ಮತ್ತೊಂದೆಡೆ ಕಾಂಗ್ರೆಸ್ಸಿಗರು ಈ ಕುರಿತು ಟ್ರೋಲ್​ ಮಾಡುತ್ತಿದ್ದು ಪ್ರತಾಪ್​ ಸಿಂಹರಿಗೆ ಮುಜುಗರ ತಂದಿದೆ.

Exit mobile version