Site icon PowerTV

ಬಿಎಸ್​​ವೈ ಇತಿಹಾಸ ಕೇಳಿದ್ರೆ ರೋಮಾಂಚನವಾಗುತ್ತೆ: ಎಂ.ಪಿ.ರೇಣುಕಾಚಾರ್ಯ

ಚಿತ್ರದುರ್ಗ: ಮುಂದಿನ ಚುನಾವಣೆಯಿಂದ ಶಿಕಾರಿಪುರ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಡುವುದಾಗಿ ಬಹಿರಂಗ ಹೇಳಿಕೆ ನೀಡಿದ ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರ ನಿರ್ಧಾರ ನೆನೆದು ಶಾಸಕ ಎಂ.ಪಿ.ರೇಣುಕಾಚಾರ್ಯ ಗದ್ಗದಿತರಾದರು.

ಇಲ್ಲಿನ ಮಾದಾರ ಚನ್ನಯ್ಯ ಗುರುಪೀಠಕ್ಕೆ ಶುಕ್ರವಾರ ಭೇಟಿ ನೀಡಿ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಅವರು ಮಾಧ್ಯಮದೊಂದಿಗೆ ಮಾತನಾಡಿದರು.

‘ಯಡಿಯೂರಪ್ಪ ಅವರ ಇತಿಹಾಸ ಕೇಳಿದರೆ ರೋಮಾಂಚನವಾಗುತ್ತದೆ. ಎಲ್ಲೋ ಇದ್ದ ನನ್ನನ್ನು ಗುರುತಿಸಿ ರಾಜಕೀಯಕ್ಕೆ ಕರೆತಂದರು. ಅವರಿಲ್ಲದ ರಾಜ್ಯ ರಾಜಕಾರಣ ನೋಡಲು ಕಷ್ಟವಾಗುತ್ತದೆ’ ಎನ್ನುವಾಗ ಅವರ ಧ್ವನಿ ಗದ್ಗದಿತವಾಯಿತು.

‘ದಕ್ಷಿಣ ಭಾರತದಲ್ಲಿ ಬಿಜೆಪಿಯ ವಿಜಯ ಪತಾಕೆ ಹಾರಿಸಿದವರು ಯಡಿಯೂರಪ್ಪ. ಅವರ ಹೇಳಿಕೆ ಆಶ್ಚರ್ಯ ಮತ್ತು ಆಘಾತ ಮೂಡಿಸಿದೆ. ಸಂಘಟನಾ ಚತುರರಾಗಿದ್ದ ಅವರು ರಾಜ್ಯದಲ್ಲಿ ಪಕ್ಷ ಕಟ್ಟಿ ಬೆಳೆಸಿದ್ದಾರೆ. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ ಅಭಿವೃದ್ಧಿಯನ್ನು ಪ್ರತಿಯೊಬ್ಬರು ಸ್ಮರಿಸುತ್ತಾರೆ. ಈ ನಿರ್ಧಾರದಿಂದ ಅವರು ಹಿಂದೆ ಸರಿಯಬೇಕು’ ಎಂದು ಮನವಿ ಮಾಡಿದರು.

Exit mobile version