Wednesday, September 3, 2025
HomeUncategorizedಮಂಕಿಪಾಕ್ಸ್: ಕೇರಳದಲ್ಲಿ ಮೂರನೇ ಪ್ರಕರಣ ಪತ್ತೆ

ಮಂಕಿಪಾಕ್ಸ್: ಕೇರಳದಲ್ಲಿ ಮೂರನೇ ಪ್ರಕರಣ ಪತ್ತೆ

ತಿರುವನಂತಪುರ: ಕೇರಳದಲ್ಲಿ ಮಂಕಿಪಾಕ್ಸ್ ವೈರಸ್‌ನ ಮೂರನೇ ಪ್ರಕರಣ ಪತ್ತೆಯಾಗಿದೆ.

ಜುಲೈ 6ರಂದು ಯುಎಇನಿಂದ ಕೇರಳಕ್ಕೆ ಬಂದಿರುವ ಮಲಪ್ಪುರ ಜಿಲ್ಲೆಯ 35 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದ್ದು, ಸೋಂಕಿತ ವ್ಯಕ್ತಿಗೆ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

ಅಲ್ಲದೆ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕ ಹೊಂದಿದವರಲ್ಲಿ ಪ್ರತ್ಯೇಕವಾಸದಲ್ಲಿರಲು ಸೂಚಿಸಲಾಗಿದ್ದು, ನಿಗಾವಹಿಸಲಾಗುತ್ತಿದೆ.
ಕೊಲ್ಲಂ ಜಿಲ್ಲೆಯಲ್ಲಿ ಮೊದಲ ಮತ್ತು ಕಣ್ಣೂರು ಜಿಲ್ಲೆಯಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿತ್ತು. ಈ ಪೈಕಿ ಕಣ್ಣೂರಿನ ಯುವಕ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular

Recent Comments