Site icon PowerTV

National Herald Case: ಜುಲೈ 26 ವಿಚಾರಣೆಗೆ ಹಾಜರಾಗಲು ಸೋನಿಯಾಗೆ ಇ.ಡಿ ಸಮನ್ಸ್​​

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ನೀಡಿದ್ದ ದಿನಾಂಕವನ್ನು ಜಾರಿ ನಿರ್ದೇಶನಾಲಯವು ಬದಲಿಸಿದೆ.

ಜುಲೈ 25ರ ಬದಲು 26 ರಂದು ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್ ನೀಡಲಾಗಿದೆ. ಬದಲಾವಣೆಗೆ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ.

ಗುರುವಾರ ನಡೆದ ಮೊದಲ ದಿನದ ವಿಚಾರಣೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಸೋನಿಯಾ, ಇ.ಡಿ ಅಧಿಕಾರಿಗಳ ಪ್ರಶ್ನೆ ಎದುರಿಸಿದ್ದರು.

ಸೋನಿಯಾ ಗಾಂಧಿ ವಿಚಾರಣೆ ಖಂಡಿಸಿ ದೇಶದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

Exit mobile version