Site icon PowerTV

ನಟ ಅರ್ಜುನ್ ಸರ್ಜಾ ತಾಯಿ ಸ್ಥಿತಿ ಗಂಭೀರ

ಬೆಂಗಳೂರು : ನಟ ಅರ್ಜುನ್ ಸರ್ಜಾ ತಾಯಿ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ.

ಶಕ್ತಿ ಪ್ರಸಾದ್ ಪತ್ನಿ ಲಕ್ಷ್ಮೀದೇವಿ(83) ಜಯನಗರದ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಳೆದ ಹನ್ನೆರಡು ದಿನದಿಂದ‌ ಐಸಿಯುನಲ್ಲಿ ಚಿಕಿತ್ಸೆಯಲ್ಲಿದ್ದರು. ಲೋ ಬಿಪಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಯಿಯ ಅನಾರೋಗ್ಯದ ಹಿನ್ನೆಲೆ ನಟ ಅರ್ಜುನ್ ಸರ್ಜಾ ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.

ಇನ್ನು, ಹೈದ್ರಾಬಾದ್ ನಲ್ಲಿ ಮಾರ್ಟಿನ್ ಚಿತ್ರದ ಶೂಟಿಂಗ್​​​ನಲ್ಲಿದ್ದ ಧ್ರುವ ಸರ್ಜಾ ಅಜ್ಜಿ ಅನಾರೋಗ್ಯ ಕಾರಣ ಶೂಟಿಂಗ್ ಬಿಟ್ಟು ಬೆಂಗಳೂರಿಗೆ ಆಗಮಿಸಿದ್ದಾರೆ.

Exit mobile version