Site icon PowerTV

ಸಿದ್ದರಾಮಯ್ಯ ಹೇಳಿಕೆ ಮುರ್ಖತನದ ಪರಮಾವಧಿ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಶೋಭೆ ತರಲ್ಲ ಎಂದು ನಗರದ ಕಾವೇರಿ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

PSI ಹಗರಣದಲ್ಲಿ ವಿಜಯೇಂದ್ರ ಭಾಗಿ ಆರೋಪ ವಿಚಾರಕ್ಕೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ಕಳ್ಳ,ಪರರ ನಂಬು ಎನ್ನುವಂತಾಗಿದೆ. ಅವರ ಹೇಳಿಕೆ ಶೋಭೆ ತರುವಂತದಲ್ಲ. ಇದು ಮುರ್ಖತನದ ಪರಮಾವಧಿ ಹೇಳಿಕೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಎಸ್​​ವೈ ಟಾಂಗ್​​ ನೀಡಿದ್ದಾರೆ.

ಇನ್ನು ನಿನ್ನೆ ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲ ಆಗಿದೆ. ನಾನು ವಿಧಾನಸಭೆ ಚುನಾವಣೆಗೆ ನಿಲ್ಲಲ್ಲ. ನನಗೆ ಶಿಕಾರಿಪುರದ ಜನ ಚುನಾವಣೆಗೆ ನಿಲ್ಲಲು ಒತ್ತಾಯ ಮಾಡುತ್ತಿದ್ದರು, ಆದ್ರೆ ನಿಲ್ಲೋದಿಲ್ಲ ವಿಜಯೇಂದ್ರ ನಿಲ್ತಾರೆ ಎಂದು ಹೇಳಿದೆ. ನಿನ್ನೆ ಅಲ್ಲಿಯ ಜನ ಒತ್ತಾಯ ಮಾಡಿದ ಕಾರಣ ನಾನು ಹಾಗೆ ಹೇಳಿದ್ದೇನೆ. ಆದ್ರೆ ಅಂತಿಮ ತಿರ್ಮಾನ ಮಾಡೋದು ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ. ಪಕ್ಷದ ತೀರ್ಮಾನವೇ ಅಂತಿಮ ನನ್ನ ಸಲಹೆ ಕೂಡ ಅಷ್ಟೇ ಎಂದರು.

Exit mobile version