Site icon PowerTV

ಒಕ್ಕಲಿಗರು ಪ್ರಾಮಾಣಿಕರನ್ನೇ ಬೆಂಬಲಿಸುತ್ತಾರೆ: ಹೆಚ್ಡಿಕೆ

ಬೆಂಗಳೂರು: ಬಿಜೆಪಿಯು ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆಗೆ ಸಿದ್ಧತೆ ಮಾಡುತ್ತಿದೆ. ಅದಕ್ಕಾಗಿಯೇ ತರಾತುರಿಯಲ್ಲಿ ಸಂಪುಟ ಸಭೆ ನಡೆಸಿ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶುಕ್ರವಾರದ ಸಂಪುಟ ಸಭೆಯನ್ನು ಗಮನಿಸಿದರೆ ಬಿಜೆಪಿಯು ಈ ವರ್ಷದ ಡಿಸೆಂಬರ್‌ ವೇಳೆಗೆ ಚುನಾವಣೆ ಎದುರಿಸಲು ಸಜ್ಜಾಗುತ್ತಿರುವಂತೆ ಕಾಣುತ್ತಿದೆ. ಯಾವುದೇ ಸಂದರ್ಭದಲ್ಲಿ ಚುನಾವಣೆ ಬಂದರೂ ನಾವು ಸಿದ್ಧ’ ಎಂದರು.

ಇನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸುವುದನ್ನು ವಿರೋಧಿಸಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಗಳಿಂದ ಅನುಕಂಪ ಗಿಟ್ಟಿಸಲು ಸಾಧ್ಯವಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Exit mobile version