Site icon PowerTV

ತೇಜಸ್ವಿಸೂರ್ಯ ವಿರುದ್ಧ ಚಾರ್ಜ್‌ಶೀಟ್

ನವದೆಹಲಿ : ಕಾಶ್ಮೀರಿ ಪಂಡಿತರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮನೆ ಎದುರು ಪ್ರತಿಭಟನೆ ನಡೆಸಿದ್ದ ಪ್ರಕರಣದಲ್ಲಿ ದಿಲ್ಲಿ ಪೊಲೀಸರು, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ 30 ಜನರ ವಿರುದ್ಧ ಕೋರ್ಟ್‌ನಲ್ಲಿ ಚಾರ್ಜ್‌ಶೀಟ್ ಹಾಕಿದ್ದಾರೆ.

‘ಸಿಎಂ ನಿವಾಸದೆದುರು ಅಕ್ರಮವಾಗಿ ಜನರು ನೆರೆದಿದ್ದಲ್ಲದೇ, ಸರ್ಕಾರಿ ಆಸ್ತಿಗೆ ಹಾನಿ ಮಾಡಿದ ಆರೋಪದ ಮೇಲೆ 10 ಜನರ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಲಾಗಿದೆ. ಇನ್ನು ಕೆಲವರ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿಯುಂಟು ಮಾಡಿದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಹೇಳಿದ್ದಾರೆ. ಪದೇ ಪದೇ ಎಚ್ಚರಿಕೆ ನೀಡಿದರೂ ಕೋರ್ಟಿನ ಆದೇಶವನ್ನು ಉಲ್ಲಂಘಿಸಿ ಬಿಜೆಪಿ ನಾಯಕರು ಸಿಎಂ ನಿವಾಸದ ಎದುರು ಪ್ರತಿಭಟನೆ ನಡೆಸಿ, ದಾಳಿ ಮಾಡಿದ್ದಾರೆ ಎಂದು ಆರೋಪಿಸಿ, 1000 ಪುಟಗಳ ಚಾರ್ಜ್‌ಶೀಟ್ ದಾಖಲಿಸಲಾಗಿದೆ.

Exit mobile version