Site icon PowerTV

ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

ನವದೆಹಲಿ : ಬಿಜೆಪಿ ಮುಖ್ಯಮಂತ್ರಿಗಳ ಮಂಡಳಿ ಸಭೆಯಲ್ಲಿ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಲು ಕೈಗೊಂಡಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದರು.

ಸಭೆ ಬಳಿಕ ನವದೆಹಲಿಯಲ್ಲಿ ಮಾತನಾಡಿದ ಅವರು, ಯೋಜನೆಗಳ ಅನುಷ್ಠಾನದಲ್ಲಿ ಮುಂದಿರುವ ರಾಜ್ಯಗಳು ತಮ್ಮ ವಿಚಾರ ವಿನಿಮಯ ಮಾಡುತ್ತಾರೆ. ಅದರಂತೆ ಸಭೆಯಲ್ಲಿ ವಿಚಾರ ವಿನಿಮಯವಾಯಿತು ಎಂದು ತಿಳಿಸಿದ್ದಾರೆ. ವಿಶೇಷವಾಗಿ ಕೇಂದ್ರ ಪ್ರಾಯೋಜಿತ ಯೋಜನೆಗಳ ಬಗ್ಗೆ ಪ್ರಧಾನಮಂತ್ರಿಗಳು ಪರಿಶೀಲಿಸಿ, ಮಾರ್ಗದರ್ಶನ ನೀಡಿದ್ದಾರೆ.

ಅಕ್ಟೋಬರ್​ನಲ್ಲಿ ಮುಂದಿನ ಸಭೆ ನಡೆಯಲಿದೆ ಎಂದರು. ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ನಂತರ ಕ್ರೀಡಾ ಸಚಿವರನ್ನು ಭೇಟಿಯಾಗುತ್ತಿದ್ದೇನೆ. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಹಾಗೂ ಸಂಜೆ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗುತ್ತಿದ್ದೇನೆ ಎಂದು ಸಿಎಂ ಮಾಹಿತಿ ನೀಡಿದರು.

Exit mobile version