Monday, August 25, 2025
Google search engine
HomeUncategorized15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು ಪ್ರಮಾಣವಚನ ಸ್ವೀಕಾರ

15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು ಪ್ರಮಾಣವಚನ ಸ್ವೀಕಾರ

ನವದೆಹಲಿ : ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ನೂತನ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು, ಬೆಳಿಗ್ಗೆ 10:15ಕ್ಕೆ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದು, ಹಾಲಿ ರಾಷ್ಟ್ರಪತಿ ಮತ್ತು ಚುನಾಯಿತ ರಾಷ್ಟ್ರಪತಿಗಳು ವಿಧ್ಯುಕ್ತ ಮೆರವಣಿಗೆಯಲ್ಲಿ ಸೆಂಟ್ರಲ್ ಹಾಲ್‌ಗೆ ಆಗಮಿಸಲಿದ್ದಾರೆ. ಬಳಿಕ ಚುನಾಯಿತ ರಾಷ್ಟ್ರಪತಿಗಳು ಭಾರತದ ಮುಖ್ಯ ನ್ಯಾಯಾಧೀಶರ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಭಾರತದ ಮುಖ್ಯ ನ್ಯಾಯಾಧೀಶರಾದ ಎನ್.ವಿ ರಮಣ ಅವರು ಪ್ರಮಾಣವಚನ ಬೋಧನೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯಸಭೆ ಸಭಾಪತಿಗಳು, ಪ್ರಧಾನ ಮಂತ್ರಿ, ಲೋಕಸಭೆ ಸ್ಪೀಕರ್, ಪರಿಷತ್ತು ಮಂತ್ರಿಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸತ್ ಸದಸ್ಯರು, ಸಿವಿಲ್ ಮತ್ತು ಮಿಲಿಟರಿ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸೆಂಟ್ರಲ್ ಹಾಲ್‌ನಲ್ಲಿ ಸಮಾರಂಭದ ಮುಕ್ತಾಯದ ನಂತರ, ರಾಷ್ಟ್ರಪತಿಗಳು ರಾಷ್ಟ್ರಪತಿ ಭವನಕ್ಕೆ ತೆರಳುತ್ತಾರೆ. ಅಲ್ಲಿ ಅವರಿಗೆ ಫೋರ್ಕೋರ್ಟ್‌ನಲ್ಲಿ ಇಂಟರ್-ಸರ್ವಿಸ್ ಗಾರ್ಡ್ ಆಫ್ ಆನರ್ ನೀಡಲಾಗುತ್ತಿದ್ದು, ಬಳಿಕ ನಿರ್ಗಮಿತ ರಾಷ್ಟ್ರಪತಿಗಳಿಗೆ ಗೌರವ ಸಲ್ಲಿಸಲಾಗುತ್ತದೆ.

RELATED ARTICLES
- Advertisment -
Google search engine

Most Popular

Recent Comments