Site icon PowerTV

ಅಭಿವೃದ್ಧಿ ಕಾಮಗಾರಿಗಳಿಗೆ ವಿರೋಧ ಪಕ್ಷ ಅಡ್ಡಿ: ಪಿಎಂ ಮೋದಿ

ಕಾನ್ಪುರ: ಪ್ರತಿಪಕ್ಷಗಳು ಸಮಾಜ ಮತ್ತು ದೇಶಕ್ಕಿಂತ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಸಮಾಜವಾದಿ ಪಕ್ಷದ ಮಾಜಿ ರಾಜ್ಯಸಭಾ ಸದಸ್ಯ ಹರ್ಮೋಹನ್ ಸಿಂಗ್ ಯಾದವ್ ಅವರ 10 ನೇ ಪುಣ್ಯತಿಥಿಯ ವರ್ಚುವಲ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರಿದಲ್ಲಿದ್ದ ಸಂದರ್ಭದಲ್ಲಿ ಕೈಗೊಂಡ ನಿರ್ಧಾರಗಳನ್ನು ಜಾರಿಗೆ ತರಲು ಸಾಧ್ಯವಾಗದ ಕಾರಣ ಹಲವು ಬಾರಿ ಪ್ರತಿಪಕ್ಷಗಳು ಸರ್ಕಾರಿ ಕೆಲಸಗಳಿಗೆ ಅಡ್ಡಿ ಉಂಟು ಮಾಡಿವೆ ಎಂದರು.

’ಈಗ ಅವರ ನಿರ್ಧಾರ ಜಾರಿಗೆ ಬಂದರೆ ಅದಕ್ಕೂ ವಿರೋಧ ವ್ಯಕ್ತವಾಗುತ್ತಿದೆ. ಇದನ್ನು ದೇಶದ ಜನರು ಇಷ್ಟಪಡುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಸಮಾಜ, ದೇಶಕ್ಕಿಂತ ಸಿದ್ಧಾಂತ ಅಥವಾ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡಲಾಗುತ್ತಿದೆ‘ ಎಂದು ಬೇಸರ ವ್ಯಕ್ತಪಡಿಸಿದರು.

Exit mobile version