Site icon PowerTV

ಕಾಂಗ್ರೆಸ್‌‌ ಪಕ್ಷಕ್ಕೆ ಇ.ಡಿಯಿಂದ ಕಿರುಕುಳ: ಮಲ್ಲಿಕಾರ್ಜುನ ಖರ್ಗೆ ಆರೋಪ

ನವೆದಹಲಿ: ಕಾಂಗ್ರೆಸ್ ಪಕ್ಷಕ್ಕೆ ಜಾರಿ ನಿರ್ದೇಶನಾಲಯವು (ಇ.ಡಿ) ಕಿರುಕುಳ ನೀಡುತ್ತಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ನಮ್ಮ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯ ಸ್ಥಿತಿ ಉತ್ತಮವಿಲ್ಲ. ಹಾಗಿದ್ದರೂ ಇ.ಡಿ ಕಚೇರಿಗೆ ಪದೇ ಪದೇ ಕರೆದು ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಇವೆಲ್ಲದರಿಂದ ಕಾಂಗ್ರೆಸ್ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ ನಾವು ಭಯಪಡುವುದಿಲ್ಲ ಎಂದು ಹೇಳಿದ್ದಾರೆ.

Exit mobile version