Site icon PowerTV

ಬೆಂಗಳೂರಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

ಬೆಂಗಳೂರು : ಪ್ರತಿಷ್ಟಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ.

ಹರ್ಷಿತಾ ಹಾಗೂ ಮರಿಟಾ ವೈಶಾಲಿ ಎಂಬ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾದವರು. ಈ ಬಗ್ಗೆ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಇದೇ 25 ನೇ ದಿನದಂದು ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಕೂಡ ಸ್ನೇಹಿತರಾಗಿದ್ದರು ಎಂದು ತಿಳಿದುಬಂದಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು.ನಾವಿನ್ನು ಮನೆಗೆ ಬರಲ್ಲ ಇನ್ನೂ ಹುಡುಕಬೇಡಿ ಎಂದು ತಿಳಿಸಿ ನಾಪತ್ತೆಯಾಗಿದ್ದಾರೆ. ಸದ್ಯ ಹೈಗ್ರೌಂಡ್ಸ್ ಪೊಲೀಸರಿಂದ ಇಬ್ಬರು ವಿದ್ಯಾರ್ಥಿನಿಯರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Exit mobile version