Site icon PowerTV

ಅರ್ಪಿತಾ ಮುಖರ್ಜಿ ಮನೆಯಲ್ಲಿ 28 ಕೋಟಿ ರೂಪಾಯಿ ನಗದು ಪತ್ತೆ

ಕೋಲ್ಕತ : ಪಶ್ಚಿಮ ಬಂಗಾಳದ ಸಚಿವ ಪಾರ್ಥವ ಚರ್ಟಜಿ ಅವರ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ಅವರ ಆಪ್ತೆ ಹಾಗೂ ಅರ್ಪಿತಾ ಮುರ್ಖಜಿ ಮನೆಯಲ್ಲಿ ಬರೋಬ್ಬರಿ 21 ಕೋಟಿ ಕೋಟಿ ರೂಪಾಯಿ ಪತ್ತೆಯಾಗಿತ್ತು, ಆದರೆ ಇದೀಗ 28 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

ಇನ್ನು, ನಟಿಯ ಮನೆಯಲ್ಲಿ ರಾಶಿ ರಾಶಿ ಹಣ ಪತ್ತೆಯಾಗಿದ್ದು, ಅರ್ಪಿತಾ ಮುಖರ್ಜಿ ಮನೆಯಲ್ಲಿ ದುಡ್ಡಿನ ರಾಶಿ ಕಂಡು ಅಧಿಕಾರಿಗಳಿಗೆ ಶಾಕ್ ಆಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ED ದಾಳಿ ಮುಂದುವರೆದಿದ್ದು, SSC ಹಗರಣ ಸಂಬಂಧ ED ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದಾರೆ.

ಅದಲ್ಲದೇ, ಅರ್ಪಿತಾಗೆ ಸೇರಿದ 2 ಫ್ಲ್ಯಾಟ್​ಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಬರೋಬ್ಬರಿ 28 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. 2000, 500 ನೋಟುಗಳ ಕಂತೆ ಕಂತೆ ಹಣ ಪತ್ತೆಯಾಗಿದ್ದು, 6 ಕೆಜಿ ಚಿನ್ನದ ಗಟ್ಟಿಗಳನ್ನು ED ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.

Exit mobile version