Site icon PowerTV

BJP ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ನಡೆದ ಬಿಜೆಪಿ ಕಾರ್ಯಕರ್ತರ ಹತ್ಯೆಯಲ್ಲಿಯೂ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ. ಕಠಿಣ ಕ್ರಮ ಕೇವಲ ಭರವಸೆಯಾಗಿಯೇ ಉಳಿದಿದೆ ಎಂದು ಪಕ್ಷ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿರುವ ಜಿಲ್ಲೆಗಳ ಮಂಡಲ ಪದಾಧಿಕಾರಿಗಳು ರಾಜೀನಾಮೆ ನೀಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.

ವಿಜಯಪುರ, ಬಾಗಲಕೋಟೆ, ಕೊಪ್ಪಳ, ಚಿತ್ರದುರ್ಗ, ಹಾಸನ ,ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಭಾಗಗಳಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ಈ ಮೂಲಕ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಈ ಹಿಂದೆ ನಡೆದ ಹಿಂದೂ ಕಾರ್ಯಕರ್ತರ ಹತ್ಯೆ ಆರೋಪಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

Exit mobile version