Site icon PowerTV

ಕಳೆದುಕೊಂಡ ಜೀವಕ್ಕೆ ಬೆಲೆಕಟ್ಟಲಾಗದು: ಸಚಿವ ಅಶ್ವಥ್ ನಾರಾಯಣ್

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ​ ಹತ್ಯೆ ಪ್ರಕರಣ ಸಂಬಂಧ ಪ್ರವೀಣ್ ಕುಟುಂಬಸ್ಥರಿಗೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್​​​ ಅವರು ವೈಯಕ್ತಿಕವಾಗಿ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಅವರು, ದುಷ್ಕೃತ್ಯಕ್ಕೆ ಬಲಿಯಾದ ನಮ್ಮ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಅವರ ಕುಟುಂಬಕ್ಕೆ ಸ್ಥೈರ್ಯ ತುಂಬುವ ಜೊತೆಗೆ ಕುಕೃತ್ಯ ನಡೆಸಿದ ದುರುಳರಿಗೆ ತಕ್ಕ ಪಾಠ ಕಲಿಸಿ ಮೃತರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಲು ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದಿದ್ದಾರೆ.

ಕಳೆದುಕೊಂಡ ಜೀವಕ್ಕೆ ಬೆಲೆಕಟ್ಟಲಾಗದು. ಪ್ರಕರಣದ ಪ್ರಾಥಮಿಕ ತನಿಖೆ ನಡೆಯುತ್ತಿದ್ದು, ಎನ್‌ಐಎಗೆ ನೀಡುವ ಭರವಸೆಯನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ. ಕಾನೂನಿನ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಈ ದುಷ್ಕೃತ್ಯ ಎಸಗಿದವರ ಧಮನ ಮಾಡುವುದರಲ್ಲಿ ಯಾವುದೇ ಅನುಮಾನಬೇಡ ಎಂದರು.

Exit mobile version