Site icon PowerTV

ಪ್ರವೀಣ್‌ ನೆಟ್ಟಾರು ಮರ್ಡರ್‌, ಪುತ್ತೂರು ಉದ್ವಿಗ್ನ..!

ಮಂಗಳೂರು : ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಣಿ ಸಮಿತಿ ಸದಸ್ಯ ಪ್ರವೀಣ್​ ನೆಟ್ಟಾರು ಅವರ ಹತ್ಯೆಯಿಂದಾಗಿ ತಾಲೂಕಿನಲ್ಲಿ ಉದ್ವಿಗ್ನ ಪರಿಸ್ಧಿತಿ ಉಂಟಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್‌ ಜಾರಿಗೊಳಿಸಿದ್ದಾರೆ.

ಬಿಜೆಪಿ ಮುಖಂಡನ ಹತ್ಯೆಗೆ ಕರಾವಳಿ ಕೆರಳಿ ಕೆಂಡವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್‌ ಜಾರಿಗೊಳಿಸಿ ಆದೇಶ ಹೊರಡಿಸಿದೆ. ನಾಳೆ ಮಧ್ಯರಾತ್ರಿ 12 ಗಂಟೆವರೆಗೂ 144 ಸೆಕ್ಷನ್‌ ಜಾರಿ ಇರಲಿದೆ.

ಅದಲ್ಲದೇ, ಪ್ರವೀಣ್‌ ಹತ್ಯೆ ಹಿನ್ನೆಲೆ ಬೆಳ್ಳಾರಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ ಮಾಡಿದ್ದು, ಪುತ್ತೂರು, ಕಡಬ, ಬೆಳ್ತಂಗಡಿ, ಬಟ್ವಾಳ ಸುಳ್ಯದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಹಾಗೆನೇ 5ಕ್ಕಿಂತ ಹೆಚ್ಚು ಜನರು ಸೇರದಂತೆ ಆದೇಶ ಹೊರಡಿಸಿದೆ.

Exit mobile version