Saturday, August 23, 2025
Google search engine
HomeUncategorizedಮುತಾಲಿಕ್​​ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿಷೇಧ: ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮುತಾಲಿಕ್​​ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿಷೇಧ: ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಿಗೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ವಿಧಿಸಿ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರವೇಶಕ್ಕೆ ಜು.28ರಿಂದ ಮುಂದಿನ ಆದೇಶದವರೆಗೆ ನಿಷೇಧ ಜಾರಿಯಲ್ಲಿ ಇರಲಿದೆ ಎಂಬ ಮಾಹಿತಿ ತಿಳಿಸಿದ್ದಾರೆ.

ಪ್ರಮೋದ್ ಮುತಾಲಿಕ್‌ ಅವರು ಬೆಳ್ಳಾರೆ ಮತ್ತು ಮೃತ ಪ್ರವೀಣ್‌ ಮನೆ ಹಾಗೂ ಇತರ ಕಡೆಗಳಿಗೆ ಭೇಟಿಯಾಗುವ ಮಾಹಿತಿ ದೊರಕಿದ್ದು, ಅವರು ಈ ಹಿಂದೆ ಭೇಟಿ ಮಾಡಿದ ಸ್ಥಳಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಹಿಂದೂ ಸಮುದಾಯದ ಜನರ ಕೋಮು ಭಾವನೆ ಕೆರಳಿಸುತ್ತ ಬಂದಿದ್ದಾರೆ ಹಾಗೂ ಕೋಮು ಸೌಹಾರ್ದ ಹದಗೆಡಿಸಿದ ಪ್ರಕರಣಗಳು ವರದಿಯಾಗಿವೆ.

ಇದೀಗ ಅವರು ಮಂಗಳೂರು ವ್ಯಾಪ್ತಿಗೆ ಪ್ರವೇಶಿಸಿದ್ದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನು ನೀಡಿ ಮತ್ತಷ್ಟು ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗುವ ಸಾಧ್ಯತೆ ಇರುವುದರಿಂದ ಅವರಿಗೆ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144ರ ಅನ್ವಯ ಆದೇಶ ಹೊರಡಿಸುವಂತೆ ಪೊಲೀಸ್ ಅಧೀಕ್ಷಕರು ಮಾಡಿರುವ ಮನವಿ ಮೇರೆಗೆ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

RELATED ARTICLES
- Advertisment -
Google search engine

Most Popular

Recent Comments