Site icon PowerTV

ವಿಕ್ರಾಂತ ರೋಣ ಅದ್ದೂರಿಯಾಗಿ ಸ್ವಾಗತ: ಮುಗಿಲು ಮುಟ್ಟಿದ ಕಿಚ್ಚನ ಅಭಿಮಾನಿಗಳ ಸಂಭ್ರಮ

ಹುಬ್ಬಳ್ಳಿ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ ರೋಣ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅಭಿಮಾನಿಗಳು ವಿಶೇಷವಾಗಿ ಸ್ವಾಗತ ಮಾಡುವ ಮೂಲಕ ಚಿತ್ರಕ್ಕೆ ಶುಭಾಶಯ ಕೋರಿದರು.

ನಗರದ ಹೃದಯ ಭಾಗದಲ್ಲಿರುವ ಅಪ್ಸರಾ ಚಿತ್ರಮಂದಿರದಲ್ಲಿ ಬೆಳ್ಳಂಬೆಳಿಗ್ಗೆ ಆಗಮಿಸಿದ ಕಿಚ್ಚನ ಅಭಿಮಾನಿಗಳು ಸುದೀಪ್ ಬ್ಯಾನರ್ ಗೆ ಕ್ಷೀರಾಭೀಷೇಕ ಮಾಡುವ ಮೂಲಕ ಹಾಗೂ ಪಟಾಕಿ ಸಿಡಿಸಿ ಸಂಭ್ರಮಿಸುವ ಮೂಲಕ ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಹಾಗಿದ್ದರೇ ಇಲ್ಲಿದೆ ನೋಡಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಿಚ್ಚನ ಅಭಿಮಾನಿಗಳ ಅಭಿಮಾನದ ಕಿಚ್ಚು.

ಇನ್ನೂ ಸುಮಾರು ದಿನಗಳಿಂದ ಸಾಕಷ್ಟು ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸುದೀಪ್ ಅಭಿನಯದ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಅಭಿಮಾನಿಗಳು ತಂಡೋಪ ತಂಡವಾಗಿ ಆಗಮಿಸುವ ಮೂಲಕ ಮೊದಲ ದಿನದ ಮೊದಲ ಶೋ ನೋಡುವ ಮೂಲಕ ಚಿತ್ರಕ್ಕೆ ಬೆಂಬಲ ಸೂಚಿಸಿದ್ದಾರೆ.

ಒಟ್ಟಿನಲ್ಲಿ ಕಿಚ್ಚನ ಅಭಿಮಾನಿಗಳ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸಂಭ್ರಮ ಮನೆ ಮಾಡುವಂತೆ ಮಾಡಿದ್ದು, ಚಿತ್ರ ಯಶಸ್ವಿಯಾಗಿ ಪ್ರದರ್ಶನವಾಗಲಿ ಎಂಬುವುದು ನಮ್ಮ ಆಶಯ.

Exit mobile version