Site icon PowerTV

ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 5 ದಿನ ಜೋರು ಮಳೆ

ಬೆಂಗಳೂರು : ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹಾಗೂ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಹಳದಿ ಅಲರ್ಟ್​ ಘೋಷಿಸಿದೆ. ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಅತಿ ವ್ಯಾಪಕ ಮಳೆ ಸುರಿಯಲಿದೆ. ಇಂದು 11.5 ಸೆಂ.ಮೀ.ನಿಂದ 20 ಸೆಂ.ಮೀ.ನಷ್ಟು ಮಳೆ ಆಗಬಹುದು ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದಾರೆ.

Exit mobile version