Site icon PowerTV

ABVP ಕಾರ್ಯಕರ್ತರ ನೋವು ನಮಗೆ ಅರ್ಥವಾಗುತ್ತೆ : ಆರಗ ಜ್ಞಾನೇಂದ್ರ

ಬೆಂಗಳೂರು : ABVP ಕಾರ್ಯಕರ್ತರ ಪ್ರತಿಭಟನೆ, ಆಕ್ರೋಶಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಅವರ ನೋವು ಏನೆಂಬುದು ನಮಗೆ ಅರ್ಥವಾಗುತ್ತದೆ. ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಬದ್ಧವಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಗೃಹ ಸಚಿವರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ ಎಂದು ಗೊತ್ತಾಯಿತು. ಆದರೆ ನಾನು ಶಿವಮೊಗ್ಗದಲ್ಲಿದ್ದೇನೆ. ಪ್ರತಿಭಟನಾಕಾರರಲ್ಲಿ ಒಂದು ಮನವಿ. ನಿಮ್ಮ ನೋವು, ಆಕ್ರೋಶವನ್ನು ನಾವು ಅರ್ಥಮಾಡಿಕೊಳ್ಳ ಬಲ್ಲೆವು. ರಾಜ್ಯದಲ್ಲಿ ಸಾವು, ನೋವುಗಳು ನಡೆದಾಗ ಸರ್ಕಾರವನ್ನು ಎಚ್ಚರಗೊಳಿಸುವುದು ಸಹಜ. ಮತಾಂಧ, ದುಷ್ಟಶಕ್ತಿಗಳ ವಿರುದ್ಧ ನಾವು ಕಠಿಣ ಕ್ರಮ ಕೈಗೊಂಡಿದ್ದೇವೆ ಎಂದರು. ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಇಂದು ಸಿದ್ದರಾಮಯ್ಯ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಅವರ ಅವಧಿಯಲ್ಲಿ 2000 ಕೇಸ್​​​ಗಳನ್ನು ವಾಪಸ್ ಪಡೆದರು. ಹಿಂದಿನ ಸರ್ಕಾರದಲ್ಲಿ ಗೃಹ ಇಲಾಖೆಯೇ ಇರಲಿಲ್ಲ. ಅವರ ಕಾಲದಲ್ಲಿ ಮಾಡಿದ್ದನ್ನು ಸರಿಪಡಿಸಲು ಸಮಯಾವಕಾಶಬೇಕು. ನಮ್ಮ ರಾಜೀನಾಮೆ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ ಎಂದು ಗುಡುಗಿದರು.

Exit mobile version