Site icon PowerTV

ಕಾಡುಗಳ್ಳರ ಸಿಂಹಸ್ವಪ್ನ ‘ರಾಣಾ’ ಇನ್ನಿಲ್ಲ

ಚಾಮರಾಜನಗರ : ಕಾಡುಗಳ್ಳರ ಸಿಂಹಸ್ವಪ್ನ, ಪತ್ತೇದಾರಿಯಲ್ಲಿ ನಂ.1 ಆಗಿದ್ದ ರಾಣಾ ಶ್ವಾನ ನಿನ್ನೆ ರಾತ್ರಿ ವಯೋಸಹಜದಿಂದ ಅಸುನೀಗಿದೆ.

ರಾಣಾನಿಗೆ 10 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ. ಹುಲಿ ಕೊಂದವರು, ಮರ ಕಡಿದವರು, ಹುಲಿ ಸೆರೆ ಕಾರ್ಯಾಚರಣೆಯಲ್ಲೂ ರಾಣಾ ಪರಾಕ್ರಮ ತೋರಿದ್ದ. ತನ್ನ ಸಾಹಸಗಳಿಂದಲೇ ರಾಣಾ ಅಭಿಮಾನಿಗಳನ್ನು ಸೃಷ್ಟಿಸಿಕೊಂಡಿದ್ದ.

ಇನ್ನು, ಬಂಡೀಪುರ ಸಫಾರಿ ಕೌಂಟರ್ ಸಮೀಪ ರಾಣಾ ಪಾರ್ಥಿವ ಶರೀರ ಇರಿಸಲಾಗಿದ್ದು, ಗೌರವ ಸಮರ್ಪಣೆ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ತಿಳಿದುಬಂದಿದೆ.ರಾಣಾ ಜರ್ಮನ್ ಶೆಫರ್ಡ್ ಜಾತಿಯ ಶ್ವಾನವಾಗಿದ್ದು, ಮಧ್ಯಪ್ರದೇಶದಲ್ಲಿ 2 ವರ್ಷ ತರಬೇತಿ ಪಡೆದಿರುವ ಸಖತ್ ಶಾರ್ಪ್ ಆಗಿದೆ. ಪ್ರಕಾಶ್ ಎಂಬವರು ಈ ರಾಣಾನನ್ನು ನೋಡಿಕೊಳ್ಳುತ್ತಿದ್ದರು. ಬಳಿಕ ಕಾಳ, ನಾಗೇಂದ್ರ ಎಂಬುವರು ಶ್ವಾನದ ಮೆಂಟರ್ ಆಗಿದ್ದರು.

Exit mobile version