Site icon PowerTV

ಇಂದು ಸಿದ್ದರಾಮಯ್ಯ ಅಮೃತ ಮಹೋತ್ಸವ ಸಂಭ್ರಮ

ದಾವಣಿಗೆರೆ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ನೆಡೆಯುತ್ತಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಘಟಾನುಘಟಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದರು. ಅಮೃತ ಮಹೋತ್ಸವ ಕಾರ್ಯಕ್ರಮದ ಮೂಲಕ ಕಾಂಗ್ರೆಸ್ ಚುನಾವಣೆ ಪ್ರಚಾರ ಕೂಡ ಆರಂಭವಾಗಿದೆ. ಮುಂದಿನ ಮುಖ್ಯಮಂತ್ರಿ ವಿಚಾರವೂ ಮುನ್ನೆಲೆಗೆ ಬಂದಿದೆ.ಕಾರ್ಯಕ್ರಮಕ್ಕೆ ದಾವಣಗೆರೆ ಸಜ್ಜಾಗಿದ್ದು, ಬೃಹತ್ ಕಟೌಟ್ ಗಳು ಬ್ಯಾನರ್ ಗಳನ್ನು ಅಳವಡಿಸಲಾಗಿದೆ.

ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಬೆಳಗಿನ ತಿಂಡಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು. ಪಲಾವ್, ಮೊಸರನ್ನ, ಸಿಹಿ ತಿಂಡಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. 200 ಕೌಂಟರ್ ಗಳಲ್ಲಿ ಊಟ ಬಡಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Exit mobile version