Site icon PowerTV

ನೀರಲ್ಲಿ ಕೊಚ್ಚಿ ಹೋದ ಶಿಕ್ಷಕ ಶವವಾಗಿ ಪತ್ತೆ

ತುಮಕೂರು : ಜಿಲ್ಲೆ ಶಿರಾ ತಾಲೂಕಿನ ಚನ್ನನಕುಂಟೆ ಗ್ರಾಮದ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಶಿಕ್ಷಕ ಶವವಾಗಿ ಪತ್ತೆಯಾಗಿದ್ದಾನೆ.

ರಾತ್ರಿ ಸುರಿದ ಬಾರಿ ಮಳೆಯಿಂದ ತುಂಬಿ ಹರಿಯುತಿದ್ದ ಚಂದನಕುಂಟೆ ಹಳ್ಳ ತುಂಬಿ ಹರಿಯುತ್ತಿತ್ತು. ದಾವೂದ್ ಪಾಳ್ಯ ಸರ್ಕಾರಿ ಶಾಲೆಯ ಶಿಕ್ಷಕ ಆರಿಫ್‌ವುಲ್ಲಾ ಶಾಲೆ ಮುಗಿಸಿ ಶಿರಾಗೆ ವಾಹನದಲ್ಲಿ ವಾಪಸಾಗುತ್ತಿದ್ದರು. ಈ ವೇಳೆ ಹಳ್ಳ ದಾಟುವಾಗ ಹಳ್ಳದ ನೀರಿನ ರಬಸಕ್ಕೆ ವಾಹನ ಸಮೇತ ಕೊಚ್ಚಿ ಹೋಗಿದ್ರು.

ಕೊಚ್ಚಿಹೋದ ಆರಿಫ್‌ವುಲ್ಲಾಗಾಗಿ ರಾತ್ರಿಯಿಡೀ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹುಡುಕಾಟ ನಡೆಸಿದ್ರು. ಇಂದು ಬೆಳಗ್ಗೆ ನೀರಿನಲ್ಲಿ ಕೊಚ್ಚಿ ಹೋದ ಶಿಕ್ಷಕ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Exit mobile version