Site icon PowerTV

ಸಕ್ಕರೆನಾಡಲ್ಲಿ ವರುಣಾರ್ಭಟ

ಮಂಡ್ಯ : ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಮಳೆರಾಯನ ಅಬ್ಬರ ಜೋರಾಗಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿತ್ತು.

ಭಾರೀ ಮಳೆಯಿಂದಾಗಿ ಮಂಡ್ಯ ಹಾಗೂ ಮದ್ದೂರು ನಡುವೆ ಹೆದ್ದಾರಿ ಮೇಲೆ ನೀರು ಹರಿಯುತ್ತಿದ್ದು, ಬೆಂಗಳೂರು-ಮೈಸೂರು ರೈಲು ಸಂಚಾರ ವ್ಯತ್ಯಯಗೊಂಡಿತ್ತು. ಇದರಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಯಿತು.

ಬೂದನೂರು ಹಾಗೂ ಮದ್ದೂರಿನ ಕೊಲ್ಲಿ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಇದೀಗ ನೀರಿನ ಪ್ರ‌ಮಾಣ ಕಡಿಮೆಯಾದ್ದರಿಂದ ಸಂಚಾರಕ್ಕೆ‌ ಅವಕಾಶ ಮಾಡಲಾಗಿದೆ. ಸದ್ಯ ಭಾರಿ ವಾಹನಗಳಿಗೆ ಮಾತ್ರ ಸಂಚಾರ ನಿಷೇಧಿಸಲಾಗಿದ್ದು, ಬದಲಿ ಮಾರ್ಗದ ಮೂಲಕ ಓಡಾಡಲು ಅವಕಾಶ ಕಲ್ಪಿಸಲಾಗಿದೆ. ಅಷ್ಟೇ ಅಲ್ಲದೇ, ಸುಳ್ಯ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಡಿಸಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

Exit mobile version