Site icon PowerTV

ಕನ್ನಡ ರಾಜ್ಯೋತ್ಸವಕ್ಕೆ ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ

ಬೆಂಗಳೂರು : ನವೆಂಬರ್ 1ರಂದು ಪುನಿತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಿಎಂ ಬಸವರಾಜ್​ ಬೊಮ್ಮಾಯಿ ತಿಳಿಸಿದ್ದಾರೆ.

ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳೆ ಉದ್ಘಾಟಿಸಿ ಮಾತನಾಡಿದ ಅವರು, ನವೆಂಬರ್ ಒಂದರಂದು ಪುನಿತ್ ರಾಜ್ ಕುಮಾರ್​​ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಘೋಷಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ, ಜವಳು ಚಿತ್ರಕಲಾ ಕಾರ್ಯಕ್ರಮದಲ್ಲಿ ಜವಳಿ ಖಾತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಸಚಿವ ಮುನಿರತ್ನ, ನಿರಾಣಿ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆಯ ಅಧಿಕಾರಿಗಳು ಉಪಸ್ಥಿತಿ ಇದ್ದರು. ಮರುಗೇಶ್ ನಿರಾಣಿ, ರೇಣುಕಾಚಾರ್ಯ, ಶಂಕರ್ ಪಾಟೀಲ್ ಮುನೇನಕೊಪ್ಪ ಸಾಥ್ ನೀಡಿದ್ದಾರೆ.

ಇನ್ನು, ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ದೆಹಲಿ ಪ್ರಯಾಣ ಬೆಳೆಸಲಿದ್ದು, ನಾಳೆ ಬೆಳಿಗ್ಗೆ 11.30ಕ್ಕೆ ಪ್ರಯಾಣಿಸಲಿದ್ದಾರೆ. ಸಂಜೆ 4.30 ಕ್ಕೆ ಅಜಾದಿ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ನಾಡಿದ್ದು ಬೆಳಿಗ್ಗೆಯಿಂದ ಸಂಜೆಯವರೆಗೆ ನೀತಿ ಆಯೋಗ ಸಭೆ ಭಾಗವಹಿಸಲಿದ್ದು, ರಾತ್ರಿ 11. 30 ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

Exit mobile version