Monday, September 1, 2025
HomeUncategorizedಉತ್ತಮ ಮಳೆಯಿಂದಾಗಿ ತಮಿಳುನಾಡಿನವರ ಶನಿಕಾಟ ತಪ್ಪಿದೆ : ಆರ್.ಅಶೋಕ್

ಉತ್ತಮ ಮಳೆಯಿಂದಾಗಿ ತಮಿಳುನಾಡಿನವರ ಶನಿಕಾಟ ತಪ್ಪಿದೆ : ಆರ್.ಅಶೋಕ್

ಚಾಮರಾಜನಗರ : ಬಿಜೆಪಿ ಸರ್ಕಾರ ಬಂದ ಬಳಿಕ ಸತತ ಮಳೆಯಾಗುತ್ತಿದೆ. ಬೇಸಿಗೆಯಲ್ಲೂ ಕೆರೆಗಳು ತುಂಬುತ್ತಿದೆ ಎಂದು ಚಾಮರಾಜನಗರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತತ ಮಳೆಯಿಂದ ತ.ನಾಡಿನ ಶನಿಕಾಟ ತಪ್ಪಿದೆ. ಮೋದಿ ಯುಗದಲ್ಲಿ 100 ಕಾಂಗ್ರೆಸ್ ಬಂದ್ರೂ ಭಯವಿಲ್ಲ. ಬಿಜೆಪಿ ಸರ್ಕಾರ ಬಂದ ಬಳಿಕ ಸತತ ಮಳೆಯಾಗುತ್ತಿದೆ. ಬೇಸಿಗೆಯಲ್ಲೂ ಕೆರೆಗಳು ತುಂಬುತ್ತಿದೆ. ಕೊಳ್ಳೇಗಾಲದ ದಾಸನಪುರ ಗ್ರಾಮದ ಸುತ್ತಮುತ್ತಲು ಮಳೆಹಾನಿ ಪ್ರದೇಶಗಳ ಪರಿಶೀಲನೆ ನಂತರ ಹೇಳಿದರು.

ಇನ್ನು, ಉತ್ತಮ ಮಳೆಯಿಂದಾಗಿ ತಮಿಳುನಾಡಿನವರ ಶನಿಕಾಟ ಕಳೆದ 3 ವರ್ಷದಿಂದ ತಪ್ಪಿದೆ.‌ ನೀರು ಕೊಡಲಾಗಲ್ಲ ಎಂಬ ಪರಿಸ್ಥಿತಿ ಈಗ ಉದ್ಭವಿಸಿಲ್ಲ. ಮೇಕೆದಾಟು ಯೋಜನೆಯ ಬಗ್ಗೆಯೂ ಅವರ ತಕರಾರು ಸಂಬಂಧ ಸಿಎಂ ಬೊಮ್ಮಾಯಿ ಕೇಂದ್ರದಲ್ಲಿ ಮಾತನಾಡುತ್ತಿದ್ದಾರೆ. ಆ ಯೋಜನೆ ಅನುಷ್ಠಾನ ಗೊಳಿಸುತ್ತೇವೆ ಎಂದು ಭರವಸೆ ನೀಡಿದರು.

ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ ಸಿದ್ದರಾಮೋತ್ಸವದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಳೆ ಬಂದು ಪ್ರವಾಹ ಎದುರಿಸುತ್ತಿದ್ದೇವೆ,ರಾಜ್ಯದಲ್ಲಿ ಹಲವರು ಜೀವ ಕಳೆದುಕೊಂಡಿದ್ದಾರೆ. ಈ ಸೂತಕದ ಸಂದರ್ಭದಲ್ಲಿ ಕಾಂಗ್ರೆಸ್ ನವರು ಮೈಸೂರು ಪಾಕ್ ತಿನ್ನಬೇಕಿತ್ತಾ.? ಒಬ್ಬ ಕಾಂಗ್ರೆಸ್ ಮುಖಂಡನೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ಕೊಟ್ಟಿಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ತಮಗೆ ಹುಟ್ಟಿದ ದಿನಾಂಕ ಗೊತ್ತಿಲ್ಲ ಎನ್ನುವಾಗ ಇದು ಬೇಕಿತ್ತಾ. ಬೇರೊಂದು ದಿನ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಬಹುದಿತ್ತು.‌ ನಾವು ಬೊಮ್ಮಾಯಿ ಸರ್ಕಾರದ ಒಂದು ವರ್ಷದ ಆಚರಣೆಯನ್ನು ರದ್ದು ಮಾಡಲಿಲ್ಲವೇ. ಕಾಂಗ್ರೆಸ್ ನವರು ರದ್ದು ಮಾಡಬಹುದಿತ್ತು ಆದರೆ ಅವರು ಮಾಡಲಿಲ್ಲ ಎಂದು ವ್ಯಂಗ್ಯವಾಡಿದರು.

ಸಿದ್ದರಾಮೋತ್ಸವದ ರೀತಿ ಪಕ್ಷೋತ್ಸವ ಮಾಡುತ್ತೇವೆಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇದು ಮೋದಿ ಯುಗ- ಬಿಜೆಪಿ ಯುಗ, ಈ ರೀತಿ 100 ಕಾಂಗ್ರೆಸ್ ಬಂದರೂ ಎದುರಿಸುವ ಶಕ್ತಿ ಬಿಜೆಪಿಗಿದೆ. ಜನರು ಈಗಾಗಲೇ ಕಾಂಗ್ರೆಸ್ ನ್ನು ದೂರ ಇಟ್ಟಿದ್ದಾರೆ. ಗೋವಾ, ಮಹಾರಾಷ್ಟ್ರ, ಯುಪಿಯಲ್ಲಿ ಏನಾಯಿತು ಎಂದು ಗೊತ್ತಿಲ್ಲವೇ. ಪಿಎಪ್ಐ ಸೇರಿದಂತೆ ಪಾಕ್ ಬೆಂಬಲಿಸುವ ಸಂಸ್ಥೆಗಳನ್ನು ನಿಷೇದಿಸಬೇಕು ಎಂಬವರಲ್ಲಿ ನಾನು ಓರ್ವ. ‌ಕೇಂದ್ರ ಸರ್ಕಾರವೂ ಇದೇ ನಿಲುವು ಹೊಂದಿದೆ. ಆದರೆ, ಒಂದು ಸಂಸ್ಥೆ ಬ್ಯಾನ್ ಮಾಡಿದರೇ ಮತ್ತೊಂದು ಹೆಸರಲ್ಲಿ ಬರುತ್ತಾರೆ. ಅವರ ಲೀಡರ್ ಗಳ ಮಾಹಿತಿ ಪಡೆದು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಬ್ಯಾನ್ ಮಾಡಲಾಗುವುದು. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಆ ಸಂಘಟನೆ ಕಾರ್ಯಕರ್ತರ ವಿರುದ್ಧ 200 ಕ್ಕೂ ಹೆಚ್ಚು ಕೇಸ್ ಹಾಕಲಾಗಿತ್ತು. ಕಾಂಗ್ರೆಸ್ ಬಂದು ಎಲ್ಲಾ ಕೇಸ್ ಗಳನ್ನು ಹಿಂತೆಗೆದುಕೊಂಡಿತ್ತು. ಅದರ ಪ್ರತಿಫಲ ಈಗ ಅನುಭವಿಸುತ್ತಿದ್ದೇವೆ ಎಂದು ಕೈ ಪಾಳೇಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments