ಬೆಂಗಳೂರು : ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ್ರಾ ಮಿಸ್ಟರ್ ಸಿದ್ದರಾಮಯ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿ ಕಾಡಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ. ನಿನ್ನೆಯ ಮೈಸೂರು ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಜೆಡಿಎಸ್ ಕೊಡುಗೆ ಏನು ಎಂದು ಪ್ರಶ್ನೆಸಿದ ಸಿದ್ದರಾಮಯ್ಯ ಪ್ರಶ್ನೆಗೆ ಸರಣಿ ಟ್ವೀಟ್ ಮೂಲಕ ಹೆಚ್.ಡಿಕೆ ಕೌಂಟರ್ ನೀಡಿದ್ದಾರೆ.
ಇನ್ನು, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದು ಸೂತ್ರದಾರನ ಕೊಡುಗೆ ಏನು..? ವಿಕಿಪೀಡಿಯ ಪ್ರಕಾರ ನಿಮ್ಮ ಜನ್ಮ ವರ್ಷ 1947, ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ್ರಾ..? ನಿಮಗೂ ಕಾಂಗ್ರೆಸ್ ಗೂ ಏನೂ ಸಂಬಂಧ ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡು. ಆ ಪಕ್ಷದ ಮೂಲ ನಾಯಕರನ್ನ ನುಂಗುತ್ತಿರುವ ನಿಮ್ಮ ಭಕಾಸುರ ಬಾಯಲ್ಲಿ. ಸ್ವಾತಂತ್ರ್ಯ ಹೋರಾಟದ ಪಾರಾಯಣವೇ..? ನಿಮಗೆ ಅದು ಬೇಕೆ ಕೇಡು ಎಂದು ಆಕ್ರೋಶ ವ್ಯಕ್ತಪಡಿಸಿದರು.


