ಬೆಂಗಳೂರು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಭಾರಿ ಮಳೆಯಾಗಲಿದೆ.
ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಮಳೆ ಹೆಚ್ಚಾಗಲಿದೆ. ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡಕವಿದ ವಾತಾವರಣ ಇರಲಿದ್ದು, ಒಂದೆರಡು ಬಾರಿ ಹಗುರ ಮಳೆಯಾಗಲಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ಇಂದು ಕೊಡಗಿನಲ್ಲಿ ಮಳೆಯಿಂದ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಇಂದಿನಿಂದ 2 ದಿನ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ.


