Site icon PowerTV

ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಮಾಡೋದು ಪ್ರತಿಯೊಬ್ಬರ ಕರ್ತವ್ಯ : ಅಶ್ವಥ್ ನಾರಾಯಣ್

ಬೆಂಗಳೂರು : ಯಾರಿಗಾದರೂ ಚೆನ್ನಾಗಿ ನಾಟಕ ಮಾಡೋಕೆ ಬರುತ್ತೆ ಅಂದರೆ ಅದು ಸಿದ್ದರಾಮಯ್ಯ ನವರಿಗೆ ಮಾತ್ರ ಎಂದು ಸಿದ್ದರಾಮಯ್ಯಗೆ ಸಚಿವ ಅಶ್ವಥ್ ನಾರಾಯಣ್ ತಿರುಗೇಟು ನೀಡಿದ್ದಾರೆ.

ಬಿಜೆಪಿಯವರು ನಾಟಕ ಮಾಡ್ತಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರಿಗಾದರೂ ಚೆನ್ನಾಗಿ ನಾಟಕ ಮಾಡೋಕೆ ಬರುತ್ತೆ ಅಂದರೆ ಅದು ಸಿದ್ದರಾಮಯ್ಯನವರಿಗೆ ಮಾತ್ರ, ನಾಟಕದ ಅನುಭವವನ್ನು ಅವರು ಬೇರೆಯವರಿಗೆ ಹೇಳಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಮಾಡೋದು ಪ್ರತಿಯೊಬ್ಬರ ಕರ್ತವ್ಯ ಎಂದರು.

ಇನ್ನು, ಅದರಲ್ಲಿ ತಪ್ಪು, ಕಂಡು ಹಿಡಿಯೋದು, ದೋಷ ಎತ್ತಿ ಹಿಡಿಯೋದು ಸರಿಯಲ್ಲ. ಒಳ್ಳೆಯದು ಮಾಡೋಕೆ ಆಗಿಲ್ಲ ಅಂದರೆ ಸಮಾಜದಲ್ಲಿ ಗೊಂದಲ ಸೃಷ್ಟಿಸಬೇಡಿ. ಒಳ್ಳೆಯದು ಮಾಡೋಕೆ ಯೋಗ್ಯತೆ ಇಲ್ಲ ಅಂದರೆ ಕೆಟ್ಟದ್ದನ್ನು ಹೇಳಬೇಡಿ. ನಿಮ್ಮ ಭಕ್ತಿ ದೇಶದ ಮೇಲೆ ಇದ್ರೆ ತಮ್ಮ ಕರ್ತವ್ಯದ ಮೂಲಕ ಮಾಡಿ. ಅದು ಬಿಟ್ಟು ಇಂತಹ ಢೋಂಘಿ ಹೇಳಿಕೆಗಳನ್ನು ನಿಲ್ಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version