Site icon PowerTV

ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ

ಚಾಮರಾಜನಗರ : ಹುಟ್ಟುಹಬ್ಬದ ದಿನವೇ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದ ಜೆಎಸ್ ಎಸ್ ಕಾಲೇಜಿನ ಹಾಸ್ಟೇಲ್​ನಲ್ಲಿ ನಡೆದಿದೆ.

ನಗರದ ಯಳಂದೂರು ತಾಲ್ಲೂಕಿನ ಅಂಬ್ಲೆ ಗ್ರಾಮದ ಚಂದನಾ(26) ಹುಟ್ಟುಹಬ್ಬದ ದಿನವೇ ತನ್ನ ಜೀವನಕ್ಕೆ ಕೊನೆಯುಸಿರೆಳೆದಿದ್ದಾರೆ. ಜೆಎಸ್ ಎಸ್ ಕಾಲೇಜ್ ನಲ್ಲಿ ಪದವಿ ವ್ಯಾಸಂಗ ಮುಗಿಸಿ ಅಲ್ಲೇ ಉಪನ್ಯಾಸಕಿಯಾಗಿದ್ದ ಚಂದನಾ. ಡೇತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅದಲ್ಲದೇ, ಸಾವಿಗೆ ನಿಖರ ಕಾರಣ ಏನೆಂದು ಇನ್ನೂ ತಿಳಿದು ಬಂದಿಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದು, ನನಗೆ ಮಾನಸಿಕ ಒತ್ತಡ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್​ನಲ್ಲಿ ಬರೆದಿದ್ದಾರೆ. ಪಟ್ಟಣ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

Exit mobile version