Site icon PowerTV

ಟ್ರ್ಯಾಕ್ಟರ್ ಮೂಲಕ ಶಾಲೆಗೆ ತೆರಳಿದ ವಿದ್ಯಾರ್ಥಿಗಳು

ವಿಜಯಪುರ: ಸರ್ಕಾರಿ ಬಸ್ ಸೌಲಭ್ಯ ಸಿಗದ ಕಾರಣ ವಿದ್ಯಾರ್ಥಿಗಳು ಟ್ರ್ಯಾಕ್ಟರ್ ನಲ್ಲಿ ಶಾಲೆಗೆ ಹೋಗಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹಲಗಣಿ ಗ್ರಾಮದಲ್ಲಿ ಘಟನೆ.

ಈ ಭಾಗದಲ್ಲಿ ಸಂಚರಿಸುವ ಬಸ್ ಗಳು ಈ ಹಳ್ಳಿಗೆ ನಿಲ್ಲಿಸದ ಕಾರಣ ಕಂಡೆಕ್ಟರ್ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಇದರಿಂದ ವಿದ್ಯಾರ್ಥಿಗಳನ್ನು ನಿರ್ವಾಹಕ ಬಿಟ್ಟು ಹೋಗಿದ್ದಾನೆ. ಬಳಿಕ ವಿದ್ಯಾರ್ಥಿಗಳ ಪೋಷಕರು ಟ್ರ್ಯಾಕ್ಟರ್ ಮೂಲಕ ವಿದ್ಯಾರ್ಥಿಗಳನ್ನು ಬಬಲೇಶ್ವರ ಪಟ್ಟಣದ ಶಾಲೆಗಳಿಗೆ ಕಳುಹಿಸಿದ್ದಾರೆ.

ಇದರಿಂದ ಬೇಸತ್ತ ವಿದ್ಯಾರ್ಥಿಗಳು ಪ್ರತಿಭಟನೆಯ ಹಾದಿ ಹಿಡಿದಿದ್ದರು. ವಿದ್ಯಾರ್ಥಿಗಳ ಜೊತೆ ಬಸ್ ನಿರ್ವಾಹಕನಿಂದ ಅಸಭ್ಯ ವರ್ತನೆ‌‌‌‌‌ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರ ಆರೋಪ ಮಾಡಿದ್ದಾರೆ.

Exit mobile version