Site icon PowerTV

ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ರಾಜ್ಯ ಬಿಜೆಪಿ ಉಸ್ತುವಾರಿ ಸ್ಪಷ್ಟನೆ

ನವದೆಹಲಿ: ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ನವದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ರೈತರ ಪರವಾಗಿ, ಯುವ ಸಮೂಹದ ಪರವಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಕಾಮನ್ ಮ್ಯಾನ್ ಸಿಎಂ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಶೇ ನೂರಕ್ಕೆ ನೂರಷ್ಟು ಬೊಮ್ಮಾಯಿ ಅವರ ನೇತೃತ್ವದಲ್ಲೆ ಮುಂದಿನ 2023 ರ ಚುನಾವಣೆ ಎದುರಿಸುತ್ತೇವೆ. ಸುಮಾರು 150 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಪೂರ್ಣ ಪ್ರಮಾಣದಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಚಾರದಲ್ಲಿ ಕಾಂಗ್ರೆಸ್ ಗೊಂದಲ ಹುಟ್ಟು ಹಾಕುತ್ತಿದೆ. ಸಿಎಂ ಬದಲಾವಣೆ ಎನ್ನುವುದು ಕಾಂಗ್ರೆಸ್ ಷಡ್ಯಂತ್ರವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​ ನಡುವೆ ಒಡಕಿದೆ. ಅದನ್ನು ಮುಚ್ಚಿ ಹಾಕಲು ಸಿಎಂ ಬದಲಾವಣೆ ವಿಚಾರ ಹುಟ್ಟು ಹಾಕಿದ್ದಾರೆ ಎಂದರು.

Exit mobile version