Site icon PowerTV

ಹಿರಿಯ ಸಾಹಿತಿ ಎಂ.ಹೆಚ್ ಕೃಷ್ಣಯ್ಯ ನಿಧನ.!

ಬೆಂಗಳೂರು: ಹಿರಿಯ ಸಾಹಿತಿ ಹಾಗೂ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ. ಎಂ.ಹೆಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ.

ಎಂ. ಹೆಚ್. ಕೃಷ್ಣಯ್ಯ ಅವರಿಗೆ 85 ವರ್ಷ ವಯಸ್ಸಾಗಿತ್ತು. 1937ರ ಜುಲೈ 21ರಂದು ಮೈಸೂರಿನಲ್ಲಿ ಜನಿಸಿದರು. ಕೃಷ್ಣಯ್ಯನವರ ತಂದೆ ಹುಚ್ಚಯ್ಯನವರು. ತಾಯಿ ಕೆಂಪಮ್ಮ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ ಮತ್ತು ಎಂ. ಎ. ಪದವಿಗಳನ್ನು ಪಡೆದ ಕೃಷ್ಣಯ್ಯನವರು ಪ್ರಾಧ್ಯಾಪಕರಾಗಿ ಬೆಂಗಳೂರು, ಕೋಲಾರ, ಮಂಗಳೂರು, ಮಾಗಡಿ ಮುಂತಾದೆಡೆಗಳಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು.

ಇವರ ಅಂತಿಮ ಸಂಸ್ಕಾರವು ಬೆಂಗಳೂರಿನ ಗಾಯತ್ರಿನಗರದ ಹರಿಶ್ಚಂದ್ರ ಘಾಟ್​ನಲ್ಲಿ ನಾಳೆ (ಶನಿವಾರ) 11 ಗಂಟೆಗೆ ನಡೆಯಲಿದೆ ಎಂದು ಹೇಳಲಾಗಿದೆ.

Exit mobile version