Saturday, September 6, 2025
HomeUncategorizedವಿಶ್ವ ಟೇಕ್ವಾಂಡೋ ಚಾಂಪಿಯನ್‌ ಶಿಪ್‌ ; ಮಂಗಳೂರಿನ ಸಂಹಿತಾಗೆ ಬೆಳ್ಳಿ

ವಿಶ್ವ ಟೇಕ್ವಾಂಡೋ ಚಾಂಪಿಯನ್‌ ಶಿಪ್‌ ; ಮಂಗಳೂರಿನ ಸಂಹಿತಾಗೆ ಬೆಳ್ಳಿ

ಮಂಗಳೂರು: ಮಲೇಷ್ಯಾದ ಕೌಲಲಾಂಪುರದಲ್ಲಿರುವ ಜುರಾ ಸ್ಟೇಡಿಯಂನಲ್ಲಿ ನಡೆದ 14ನೇ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಚಾಂಪಿಯನ್‌ ಶಿಪ್ ಮಹಿಳಾ (ಕಿರಿಯ) ವಿಭಾಗದಲ್ಲಿ ಮಂಗಳೂರಿನ ಸಂಹಿತಾ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

ಟೇಕ್ವಾಂಡೋ ಚಾಂಪಿಯನ್‌ ಶಿಪ್ ಮಹಿಳಾ (ಕಿರಿಯ) ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಬೆಳ್ಳಿ ಪದಕವನ್ನು ಗೆದ್ದುಕೊಳ್ಳುವ ಮೂಲಕ ಮಂಗಳೂರಿನ ಕೀರ್ತಿ ಪತಾಕೆ ಹಾರಿಸಿದ್ದಾಳೆ.

ಇವರು ಕೋಚ್‌ ಗುರುರಾಜ್‌ ಇಟಗಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಮಂಗಳೂರಿನ ಶಾರದಾ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಸಂಹಿತಾ, ಕದ್ರಿ ವಾಸುದೇವ ಭಟ್‌ ಕುಂಜತ್ತೋಡಿ ಮತ್ತು ದೀಪಾ ಕೆ.ಎಸ್.‌ ಅವರ ಪುತ್ರಿ. ಸಂಹಿತಾ ಅವರು 2022ರಲ್ಲಿ ನೇಪಾಳದಲ್ಲಿ ನಡೆದ ವಿಶ್ವ ಮಟ್ಟದ ಟೇಕ್ವಾಂಡೋ ಕೂಟದಲ್ಲಿ ಚಿನ್ನದ ಪದಕ ಗಳಿಸಿದ್ದರು.

RELATED ARTICLES
- Advertisment -
Google search engine

Most Popular

Recent Comments