Monday, August 25, 2025
Google search engine
HomeUncategorizedಹೊಸ ಯೋಜನೆಗಳನ್ನ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಹೊಸ ಯೋಜನೆಗಳನ್ನ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಮಾಣಿಕ್ ಷಾ ಮೈದಾನದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಹತ್ವದ ಹೊಸ ಯೋಜನೆಗಳನ್ನ ಘೋಷಣೆ ಮಾಡಿದ್ದಾರೆ.

ಸ್ವಚ್ಚತೆ ಹಾಗೂ ಆರೋಗ್ಯಕರ ವಾತಾವರಣಕ್ಕೆ ಒತ್ತು ನೀಡುವುದಕ್ಕೆ ಸುಮಾರು 250 ಕೋಟಿ ವೆಚ್ಚದಲ್ಲಿ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ನೂರರಷ್ಟು ಶೌಚಾಲಯ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಪಣತೊಟ್ಟಿದೆ.

ಹಾಗೇ, ಕರ್ನಾಟಕ ಕರಕುಶನ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ರೂ ಸಾಲ ಸಹಾಯಧನ ಯೋಜನೆ, ಭೂ ರಹಿತ ಕೃಷಿನ ಕಾರ್ಮಿಕರ ಮಕ್ಕಳಿಗೂ ರೈತ ವಿದ್ಯಾನಿದಿ ಯೋಜನೆ ಸೌಲಭ್ಯ.

ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ತೆರೆಯುವ ಮೂಲಕ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದು. 8100 ಮಹಿಳೆಯರಿಗೂ ಇದರಿಂದ ಉದ್ಯೋಗಾವಾಕಾಶ ದೊರೆಯಲಿದೆ.

RELATED ARTICLES
- Advertisment -
Google search engine

Most Popular

Recent Comments